ಜ್ಞಾನದಿಂದ ಮನೆಯು ಕಟ್ಟಲ್ಪಡುತ್ತದೆ; ವಿವೇಕದಿಂದ ಅದು ಸ್ಥಿರಗೊಳ್ಳುತ್ತದೆ;
1ಕೆಟ್ಟವರಿಗೆ ವಿರೋಧವಾಗಿ ನೀನು ಅಸೂಯೆಪಡದಿರು; ಇಲ್ಲವೆ ಅವರ ಸಂಗಡ ಇರುವದಕ್ಕೆ ಅಪೇಕ್ಷಿಸಬೇಡ;
2ಅವರ ಹೃದಯವು ನಾಶನವನ್ನು ಅಭ್ಯಾಸಿಸುತ್ತದೆ; ಅವರ ತುಟಿಗಳು ಹಾನಿ ಯನ್ನು ಪ್ರಸ್ತಾಪಿಸುತ್ತವೆ.
3ಜ್ಞಾನದಿಂದ ಮನೆಯು ಕಟ್ಟಲ್ಪಡುತ್ತದೆ; ವಿವೇಕದಿಂದ ಅದು ಸ್ಥಿರಗೊಳ್ಳುತ್ತದೆ;
4ತಿಳುವಳಿಕೆಯಿಂದ ಎಲ್ಲಾ ಅಮೂಲ್ಯವಾದ ಮತ್ತು ಇಷ್ಟ ಸಂಪತ್ತಿನಿಂದ ಕೋಣೆಗಳು ತುಂಬಲ್ಪಡುವವು.
5ಜ್ಞಾನಿಯು ಬಲವುಳ್ಳವನು; ಹೌದು, ತಿಳುವಳಿಕೆಯು ಳ್ಳವನು ಬಲವನ್ನು ಹೆಚ್ಚಿಸಿಕೊಳ್ಳುತ್ತಾನೆ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ