ಅರಸ ನಾದ ದಾರ್ಯಾವೆಷನ ಆಳಿಕೆಯ ಆರನೇ ವರುಷದ ಅಡಾರ್ ತಿಂಗಳ ಮೂರನೇ ದಿವಸದಲ್ಲಿ ಈ ಆಲಯವು ಕಟ್ಟಿ ತೀರಿಸಲ್ಪಟ್ಟಿತು.
13ಆಗ ನದಿಯ ಈಚೆಯಲ್ಲಿರುವ ಅಧಿಪತಿಯಾದ ತತ್ತೆನೈಯೂ ಶೆತರ್ಬೋಜೆನೈಯೂ ಅವರ ಜೊತೆ ಗಾರರೂ ಅರಸನಾದ ದಾರ್ಯಾವೆಷನು ಕಳುಹಿ ಸಿದ ಆಜ್ಞೆಯ ಪ್ರಕಾರ ತ್ವರೆಯಾಗಿ ಮಾಡಿದರು.
14ಹಾಗೆಯೇ ಯೆಹೂದ್ಯರ ಹಿರಿಯರು ಕಟ್ಟಿಸಿ, ಪ್ರವಾದಿಗಳಾದ ಹಗ್ಗಾಯನೂ ಇದ್ದೋನನ ಮಗ ನಾದ ಜೆಕರೀಯನೂ ಪ್ರವಾದಿಸಿದ್ದರಿಂದ ಅಭಿವೃದ್ಧಿ ಯನ್ನು ಹೊಂದಿದರು. ಅವರು ಇಸ್ರಾಯೇಲ್ ದೇವರ ಅಪ್ಪಣೆಯ ಪ್ರಕಾರವೂ ಕೋರೆಷನು ದಾರ್ಯಾವೆಷನು ಪಾರಸಿಯ ಅರಸನಾದ ಅರ್ತಷಸ್ತನು ಎಂಬವರ ಅಪ್ಪಣೆಯ ಪ್ರಕಾರವೂ ಕಟ್ಟಿ ತೀರಿಸಿದರು.
15ಅರಸ ನಾದ ದಾರ್ಯಾವೆಷನ ಆಳಿಕೆಯ ಆರನೇ ವರುಷದ ಅಡಾರ್ ತಿಂಗಳ ಮೂರನೇ ದಿವಸದಲ್ಲಿ ಈ ಆಲಯವು ಕಟ್ಟಿ ತೀರಿಸಲ್ಪಟ್ಟಿತು.
16ಆಗ ಇಸ್ರಾಯೇಲ್ಯರ ಮಕ್ಕಳೂ ಯಾಜಕರೂ ಲೇವಿಯರೂ ಸೆರೆಯಿಂದ ಬಂದ ಮಿಕ್ಕಾ ದವರೂ ದೇವರ ಆಲಯವನ್ನು ಸಂತೋಷದಿಂದ ಪ್ರತಿಷ್ಠೆಮಾಡಿದರು.
17ದೇವರ ಆಲಯದ ಪ್ರತಿಷ್ಠೆ ಗೋಸ್ಕರ ನೂರು ಹೋರಿಗಳನ್ನೂ ಇನ್ನೂರು ಟಗರು ಗಳನ್ನೂ ನಾನೂರು ಕುರಿಮರಿಗಳನ್ನೂ ಇಸ್ರಾಯೇಲ್ ಕುಲಗೋತ್ರಗಳ ಲೆಕ್ಕದ ಪ್ರಕಾರ ಸಮಸ್ತ ಇಸ್ರಾ ಯೇಲ್ಯರ ಪಾಪವನ್ನು ಕಳೆಯುವದಕ್ಕೋಸ್ಕರ ಹನ್ನೆರಡು ಮೇಕೆಯ ಹೋತಗಳನ್ನೂ ಬಲಿ ಅರ್ಪಿಸಿದರು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ