೧ ಸಮುವೇಲನು 2:26

ಆದರೆ ಬಾಲಕನಾದ ಸಮು ವೇಲನು ಬೆಳೆಯುತ್ತಾ ಇದ್ದನು; ಕರ್ತನ ಮತ್ತು ಮನುಷ್ಯರ ದಯೆಗೆ ಪಾತ್ರನಾಗಿದ್ದನು.

ಸಂದರ್ಭದೊಂದಿಗೆ ಓದಿ · ೧ ಸಮುವೇಲನು 2

24ನನ್ನ ಕುಮಾ ರರೇ, ಹಾಗೆ ಮಾಡಬೇಡಿರಿ; ಯಾಕಂದರೆ ನಾನು ಕೇಳುವ ವರ್ತಮಾನ ಒಳ್ಳೇದಲ್ಲ; ಕರ್ತನ ಜನರು ಆಜ್ಞೆವಿಾರಿ ನಡೆಯುವ ಹಾಗೆ ಮಾಡುತ್ತೀರಿ.

25ಮನು ಷ್ಯನಿಗೆ ವಿರೋಧವಾಗಿ ಮನುಷ್ಯನು ಪಾಪಮಾಡಿದರೆ ನ್ಯಾಯಾಧಿಪತಿಗಳು ಅವನಿಗೆ ನ್ಯಾಯತೀರಿಸುವರು.ಒಬ್ಬನು ಕರ್ತನಿಗೆ ವಿರೋಧವಾಗಿ ಪಾಪಮಾಡಿದರೆ ಅವನಿಗೋಸ್ಕರ ಪ್ರಾರ್ಥನೆ ಮಾಡತಕ್ಕವನು ಯಾರು ಅಂದನು. ಆದರೆ ಕರ್ತನು ಅವರನ್ನು ಕೊಂದುಹಾಕ ಬೇಕೆಂದಿದ್ದನಷ್ಟೆ, ಅವರು ತಮ್ಮ ತಂದೆಯ ಮಾತನ್ನು ಕೇಳದೆಹೋದರು.

26ಆದರೆ ಬಾಲಕನಾದ ಸಮು ವೇಲನು ಬೆಳೆಯುತ್ತಾ ಇದ್ದನು; ಕರ್ತನ ಮತ್ತು ಮನುಷ್ಯರ ದಯೆಗೆ ಪಾತ್ರನಾಗಿದ್ದನು.

27ದೇವರ ಮನುಷ್ಯನೊಬ್ಬನು ಏಲಿಯ ಬಳಿಗೆ ಬಂದು ಅವನಿಗೆ--ಕರ್ತನು ಹೀಗೆ ಹೇಳುತ್ತಾನೆ--ನಿನ್ನ ತಂದೆಯ ಮನೆಯವರು ಐಗುಪ್ತದಲ್ಲಿ ಫರೋ ಹನ ಮನೆಯೊಳಗೆ ಇರುವಾಗ ನಾನು ಅವರಿಗೆ ಪ್ರತ್ಯಕ್ಷವಾದದ್ದು ಸ್ಪಷ್ಟವಾಗಲಿಲ್ಲವೋ?

28ನನ್ನ ಯಜ್ಞ ವೇದಿಯ ಮೇಲೆ ಬಲಿಯನ್ನು ಅರ್ಪಿಸುವದಕ್ಕೂ ಧೂಪವನ್ನು ಸುಡುವದಕ್ಕೂ ನನ್ನ ಮುಂದೆ ಏಫೋ ದನ್ನು ಧರಿಸಿಕೊಂಡಿರುವದಕ್ಕೂ ನಾನು ಇಸ್ರಾಯೇಲಿನ ಎಲ್ಲಾ ಗೋತ್ರಗಳಿಂದ ನನಗೆ ಯಾಜಕನಾಗಿರ ಬೇಕೆಂದು ನಾನು ಅವನನ್ನು ಆದುಕೊಳ್ಳಲಿಲ್ಲವೋ? ನಿನ್ನ ತಂದೆಯ ಮನೆಗೆ ಇಸ್ರಾಯೇಲ್‌ ಮಕ್ಕಳು ಮಾಡುವ ದಹನಬಲಿಗಳನ್ನೆಲ್ಲಾ ಕೊಡಲಿಲ್ಲವೋ?

೧ ಸಮುವೇಲನು 2 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी