ಪ್ರಕಟನೆ 12:10

ಆಗ ಪರಲೋಕದಲ್ಲಿ ಮಹಾಶಬ್ದವನ್ನು ನಾನು ಕೇಳಿದೆನು. ಅದು--ಈಗ ರಕ್ಷಣೆಯೂ ಶಕ್ತಿಯೂ ನಮ್ಮ ದೇವರ ರಾಜ್ಯವೂ ಆತನ ಕ್ರಿಸ್ತನ ಅಧಿಕಾರವೂ ಬಂದವು; ಯಾಕಂದರೆ ಹಗಲಿರುಳು ನಮ್ಮ ಸಹೋದರರ ಮೇಲೆ ನಮ್ಮ ದೇವರ ಮುಂದೆ ದೂರು ಹೇಳಿದ ದೂರು ಗಾರನು ದೊಬ್ಬಲ್ಪಟ್ಟಿದ್ದಾನೆ.

ಸಂದರ್ಭದೊಂದಿಗೆ ಓದಿ · ಪ್ರಕಟನೆ 12

8ಆಗ ಪರಲೋಕದಲ್ಲಿ ಅವರಿಗೆ ಸ್ಥಾನವು ಇನ್ನೆಂದಿಗೂ ಇಲ್ಲದೆ ಹೋಯಿತು.

9ಭೂಲೋಕದವರನ್ನೆಲ್ಲಾ ಮೋಸಗೊಳಿಸುವ ಆ ಮಹಾ ಘಟಸರ್ಪನು ಅಂದರೆ ಪಿಶಾಚನೆಂತಲೂ ಸೈತಾನನೆಂತಲೂ ಹೆಸರುಳ್ಳ ಪುರಾ ತನ ಸರ್ಪವು ದೊಬ್ಬಲ್ಪಟ್ಟು ಭೂಮಿಗೆ ಬಿದ್ದನು; ಅವನ ದೂತರೂ ಅವನೊಂದಿಗೆ ದೊಬ್ಬಲ್ಪಟ್ಟರು.

10ಆಗ ಪರಲೋಕದಲ್ಲಿ ಮಹಾಶಬ್ದವನ್ನು ನಾನು ಕೇಳಿದೆನು. ಅದು--ಈಗ ರಕ್ಷಣೆಯೂ ಶಕ್ತಿಯೂ ನಮ್ಮ ದೇವರ ರಾಜ್ಯವೂ ಆತನ ಕ್ರಿಸ್ತನ ಅಧಿಕಾರವೂ ಬಂದವು; ಯಾಕಂದರೆ ಹಗಲಿರುಳು ನಮ್ಮ ಸಹೋದರರ ಮೇಲೆ ನಮ್ಮ ದೇವರ ಮುಂದೆ ದೂರು ಹೇಳಿದ ದೂರು ಗಾರನು ದೊಬ್ಬಲ್ಪಟ್ಟಿದ್ದಾನೆ.

11ಅವರು ಪ್ರಾಣದ ಮೇಲಣ ಪ್ರೀತಿಯನ್ನು ತೊರೆದು ಕುರಿಮರಿಯಾದಾತನ ರಕ್ತದಿಂದಲೂ ತಮ್ಮ ಸಾಕ್ಷಿಯ ವಾಕ್ಯದಿಂದಲೂ ಅವ ನನ್ನು ಜಯಿಸಿದರು.

12ಆದದರಿಂದ ಪರಲೋಕಗಳೇ, ಅದರಲ್ಲಿ ವಾಸಮಾಡುವವರೇ, ಹರ್ಷಗೊಳ್ಳಿರಿ. ಭೂಮಿಯ ಮೇಲೆ ಮತ್ತು ಸಮುದ್ರದಲ್ಲಿ ಇರುವವರಿಗೆ ಅಯ್ಯೊ! ಯಾಕಂದರೆ ಸೈತಾನನು ತನಗಿರುವ ಕಾಲವು ಸ್ವಲ್ಪವೆಂದು ತಿಳಿದು ಮಹಾರೌದ್ರವುಳ್ಳವನಾಗಿ ನಿಮ್ಮ ಕಡೆಗೆ ಇಳಿದು ಬಂದಿದ್ದಾನೆ ಎಂಬದಾಗಿ ಹೇಳಿತು.

ಪ್ರಕಟನೆ 12 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी