ಎಜ್ರನು 3:2

ಆಗ ಯೋಚಾದಾಕನ ಮಗನಾದ ಯೇಷೂವನೂ ಅವನ ಸಹೋದರರಾದ ಯಾಜಕರೂ ಶೆಯಲ್ತೀಯೇಲನ ಮಗನಾದ ಜೆರುಬ್ಬಾಬೆಲನೂ ಅವನ ಸಹೋದರರೂ ಎದ್ದು ದೇವರ ಮನುಷ್ಯನಾದ ಮೋಶೆಯ ನ್ಯಾಯ ಪ್ರಮಾಣದಲ್ಲಿ ಬರೆದಿರುವ ಹಾಗೆ ದಹನಬಲಿಗಳನ್ನು ಅರ್ಪಿಸುವದಕ್ಕೆ ಇಸ್ರಾಯೇಲ್‌ ದೇವರ ಬಲಿಪೀಠವನ್ನು ಕಟ್ಟಿಸಿದರು.

ಸಂದರ್ಭದೊಂದಿಗೆ ಓದಿ · ಎಜ್ರನು 3

1ಏಳನೇ ತಿಂಗಳು ಬಂದ ತರುವಾಯ ಇಸ್ರಾಯೇಲ್‌ ಮಕ್ಕಳು ಪಟ್ಟಣಗಳಲ್ಲಿ ಇರುವಾಗ ಜನರು ಒಬ್ಬ ಮನುಷ್ಯನೇ ಎಂಬಂತೆ ಯೆರೂಸಲೇಮಿನಲ್ಲಿ ಕೂಡಿಕೊಂಡರು.

2ಆಗ ಯೋಚಾದಾಕನ ಮಗನಾದ ಯೇಷೂವನೂ ಅವನ ಸಹೋದರರಾದ ಯಾಜಕರೂ ಶೆಯಲ್ತೀಯೇಲನ ಮಗನಾದ ಜೆರುಬ್ಬಾಬೆಲನೂ ಅವನ ಸಹೋದರರೂ ಎದ್ದು ದೇವರ ಮನುಷ್ಯನಾದ ಮೋಶೆಯ ನ್ಯಾಯ ಪ್ರಮಾಣದಲ್ಲಿ ಬರೆದಿರುವ ಹಾಗೆ ದಹನಬಲಿಗಳನ್ನು ಅರ್ಪಿಸುವದಕ್ಕೆ ಇಸ್ರಾಯೇಲ್‌ ದೇವರ ಬಲಿಪೀಠವನ್ನು ಕಟ್ಟಿಸಿದರು.

3ಬಲಿಪೀಠವನ್ನು ಅದರ ಅಧಾರಗಳ ಮೇಲೆ ಇಟ್ಟರು; ಯಾಕಂದರೆ ಆ ದೇಶದ ಜನರಿ ಗೋಸ್ಕರ ಅವರಿಗೆ ಹೆದರಿಕೆ ಇತ್ತು. ಅವರು ಅದರ ಮೇಲೆ ದಹನಬಲಿಗಳನ್ನು ಉದಯದಲ್ಲಿಯೂ ಸಾಯ ಂಕಾಲದಲ್ಲಿಯೂ ಅರ್ಪಿಸಿದರು.

4ಇದಲ್ಲದೆ ಬರೆ ಯಲ್ಪಟ್ಟ ಹಾಗೆಯೇ ಅವರು ಪರ್ಣಶಾಲೆಗಳ ಹಬ್ಬ ವನ್ನು ಆಚರಿಸಿ ಪ್ರತಿದಿನದ ಕಾರ್ಯಕ್ಕೆ ತಕ್ಕ ನೇಮಕದ ಹಾಗೆ ಲೆಕ್ಕದಿಂದ ದಿನದಿನದ ದಹನಬಲಿ ಗಳನ್ನು ಅರ್ಪಿಸಿದರು.

ಎಜ್ರನು 3 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी