ಹಾಗೆಯೇ ಆ ಯೌವನಸ್ಥನು ಅಂದರೆ ಪ್ರವಾದಿ ಯಾದ ಆ ಯೌವನಸ್ಥನು ಗಿಲ್ಯಾದಿನಲ್ಲಿರುವ ರಾಮೋತಿಗೆ ಹೋದನು.
2ನೀನು ಅಲ್ಲಿಗೆ ಸೇರಿದಾಗ ನಿಂಷಿಯ ಮಗನಾಗಿರುವ ಯೆಹೋಷಾಫಾಟನ ಮಗ ನಾದ ಯೇಹುವನ್ನು ಅಲ್ಲಿ ನೋಡಿ ಒಳಗೆ ಹೋಗಿ ಅವನನ್ನು ತನ್ನ ಸಹೋದರರ ಮಧ್ಯದಿಂದ ಏಳ ಮಾಡಿ ಒಳಗಿನ ಕೊಠಡಿಗೆ ಕರಕೊಂಡು ಹೋಗಿ ಎಣ್ಣೆಯ ಪಾತ್ರೆಯನ್ನು ತಕ್ಕೊಂಡು ಅವನ ತಲೆಯ ಮೇಲೆ ಹೊಯ್ದು
3ಅವನಿಗೆ--ಇಸ್ರಾಯೇಲಿನ ಮೇಲೆ ಅರಸನಾಗಿರಲು ನಿನ್ನನ್ನು ಅಭಿಷೇಕಿಸಿದ್ದೇನೆ ಎಂದು ಕರ್ತನು ಹೇಳುತ್ತಾನೆಂಬದಾಗಿ ಹೇಳಿ ಕದವನ್ನು ತೆರೆದು ತಡಮಾಡದೆ ಓಡಿಹೋಗು ಅಂದನು.
4ಹಾಗೆಯೇ ಆ ಯೌವನಸ್ಥನು ಅಂದರೆ ಪ್ರವಾದಿ ಯಾದ ಆ ಯೌವನಸ್ಥನು ಗಿಲ್ಯಾದಿನಲ್ಲಿರುವ ರಾಮೋತಿಗೆ ಹೋದನು.
5ಅವನು ಅಲ್ಲಿ ಸೇರಿದಾಗ ಇಗೋ, ಸೈನ್ಯಾಧಿಪತಿಗಳು ಕುಳಿತುಕೊಂಡಿದ್ದರು. ಆಗ ಅವನು -- ಅಧಿಪತಿಯೇ, ನಿನಗೆ ಹೇಳಬೇಕಾದ ಮಾತು ನನಗೆ ಉಂಟು ಅಂದನು. ಯೇಹುವು ಅವ ನಿಗೆ--ನಮ್ಮೆಲ್ಲರಲ್ಲಿ ಯಾರಿಗೆ ಅಂದನು. ಅವನುಅಧಿಪತಿಯೇ, ನಿನಗೆ ಅಂದನು.
6ಅವನು ಎದ್ದು ಮನೆಯೊಳಕ್ಕೆ ಹೋದನು. ಆಗ ಇವನು ಎಣ್ಣೆ ಯನ್ನು ಅವನ ತಲೆಯ ಮೇಲೆ ಹೊಯ್ದು ಅವನಿಗೆ ಹೇಳಿದ್ದು--ಇಸ್ರಾಯೇಲಿನ ದೇವರಾದ ಕರ್ತನು ಹೇಳುವದೇನಂದರೆ, ಕರ್ತನ ಜನರಾದ ಇಸ್ರಾ ಯೇಲಿನ ಮೇಲೆ ಅರಸನಾಗಿರಲು ನಿನ್ನನ್ನು ಅಭಿಷೇ ಕಿಸಿದ್ದೇನೆ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ