ಈಗ ನೀನು ಬೀಳುವ ದಿವಸದಲ್ಲಿ ದ್ವೀಪಗಳು ನಡುಗುವವು ಹೌದು, ನೀನು ಹೋಗಿಬಿಡುವದರಿಂದ ಸಮುದ್ರದಲ್ಲಿರುವ ದ್ವೀಪಗಳು ಗಾಬರಿಯಾಗುವವು.
16ಆಮೇಲೆ ಸಮುದ್ರದ ಎಲ್ಲಾ ಪ್ರಭುಗಳು ತಮ್ಮ ಸಿಂಹಾಸನಗಳನ್ನು ಬಿಟ್ಟು ಇಳಿಯುವರು; ತಮ್ಮ ನಿಲು ವಂಗಿಗಳನ್ನು ತೆಗೆದುಹಾಕುವರು, ಚಿತ್ರವಾಗಿ ಹೊಲಿದ ತಮ್ಮ ವಸ್ತ್ರಗಳನ್ನು ಇಟ್ಟುಬಿಡುವರು; ನಡುಗುವಿಕೆಯನ್ನು ಹೊದ್ದುಕೊಳ್ಳುವರು; ನೆಲದ ಮೇಲೆ ಕುಳಿತುಕೊಳ್ಳು ವರು, ಕ್ಷಣಕ್ಷಣಕ್ಕೂ ನಡುಗುವರು, ನಿನ್ನ ವಿಷಯ ವಾಗಿ ಆಶ್ಚರ್ಯಪಡುವರು.
17ನಿನ್ನ ವಿಷಯದಲ್ಲಿ ಗೋಳಾಟವನ್ನೆತ್ತಿ ನಿನಗೆ ಹೇಳುವದೇನಂದರೆ, ಸಮು ದ್ರಗಳ ಬಳಿಯಲ್ಲಿ ವಾಸಿಸಿದವಳೇ, ಹೆಸರು ಗೊಂಡ ಪಟ್ಟಣವೇ, ನೀನೂ ತನ್ನ ನಿವಾಸಿಗಳೂ ಸಮುದ್ರದಲ್ಲಿ ಬಲವಾಗಿದ್ದವಳೇ, ಅದರ ಸಮುದ್ರ ಸಂಚಾರವನ್ನೂ ಭಯಪಡಿಸಿದವಳೇ, ಅಯ್ಯೋ, ಹೇಗೆ ನಾಶವಾದಿ?
18ಈಗ ನೀನು ಬೀಳುವ ದಿವಸದಲ್ಲಿ ದ್ವೀಪಗಳು ನಡುಗುವವು ಹೌದು, ನೀನು ಹೋಗಿಬಿಡುವದರಿಂದ ಸಮುದ್ರದಲ್ಲಿರುವ ದ್ವೀಪಗಳು ಗಾಬರಿಯಾಗುವವು.
19ದೇವರಾದ ಕರ್ತನು ಹೀಗೆ ಹೇಳುತ್ತಾನೆ--ನಾನು ನಿನ್ನನ್ನು ನಿವಾಸಿಗಳಿಲ್ಲದ ಪಟ್ಟಣದ ಹಾಗೆ ಹಾಳಾದ ಪಟ್ಟಣವಾಗಿ ಮಾಡುವಾಗ ಹೆಚ್ಚು ನೀರು ಮುಚ್ಚುವ ಹಾಗೆ ಅಗಾಧವನ್ನು ನಿನ್ನ ಮೇಲೆ ಬರ ಮಾಡುವೆನು.
20ನಿನ್ನನ್ನು ಅಧೋಲೋಕಕ್ಕೆ ತಳ್ಳಿ ಪಾತಾಳಕ್ಕೆ ಇಳಿದ ನಿಮ್ಮ ಪೂರ್ವ ಕಾಲದವರೊಂದಿಗೆ ವಾಸಿಸುವಂತೆ ಮಾಡುವೆನು. ನಾನು ನಿನ್ನ ಮಹಿಮೆಯನ್ನು ಜೀವ ಲೋಕದಲ್ಲಿ ನೆಲೆಗೊಳಿಸದ ನಿರ್ನಿವಾಸಿಯಾಗುವಂತೆ ನಿನ್ನನ್ನು ಪಾತಾಳಕ್ಕಿಳಿದವರ ಸಹವಾಸಕ್ಕೆ ಸೇರಿಸುವೆನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ