ಲೂಕನು 20:15

ಅವರು ಅವನನ್ನು ದ್ರಾಕ್ಷೇ ತೋಟದ ಹೊರಗೆಹಾಕಿ ಕೊಂದರು. ಹೀಗಿರಲು ದ್ರಾಕ್ಷೇತೋಟದ ಯಜ ಮಾನನು ಅವರಿಗೆ ಏನು ಮಾಡುವನು?

ಸಂದರ್ಭದೊಂದಿಗೆ ಓದಿ · ಲೂಕನು 20

13ಆಗ ದ್ರಾಕ್ಷೇತೋಟದ ಯಜಮಾನನು--ನಾನೇನು ಮಾಡಲಿ? ನಾನು ನನ್ನ ಪ್ರಿಯ ಮಗನನ್ನೇ ಕಳುಹಿ ಸುವೆನು. ಅವರು ಇವನನ್ನು ನೋಡಿಯಾದರೂ ಇವ ನನ್ನು ಗೌರವಿಸಿಯಾರು ಎಂದು ಅಂದುಕೊಂಡನು.

14ಆದರೆ ಒಕ್ಕಲಿಗರು ಅವನನ್ನು ನೋಡಿದಾಗ ತಮ್ಮತಮ್ಮೊಳಗೆ--ಇವನೇ ಬಾಧ್ಯಸ್ಥನು; ಬನ್ನಿರಿ, ಇವ ನನ್ನು ಕೊಂದುಹಾಕೋಣ ಬಾಧ್ಯತೆಯು ನಮ್ಮದಾಗು ತ್ತದೆ ಎಂದು ಆಲೋಚನೆ ಮಾಡಿಕೊಂಡರು.

15ಅವರು ಅವನನ್ನು ದ್ರಾಕ್ಷೇ ತೋಟದ ಹೊರಗೆಹಾಕಿ ಕೊಂದರು. ಹೀಗಿರಲು ದ್ರಾಕ್ಷೇತೋಟದ ಯಜ ಮಾನನು ಅವರಿಗೆ ಏನು ಮಾಡುವನು?

16ಅವನು ಬಂದು ಈ ಒಕ್ಕಲಿಗರನ್ನು ಸಂಹರಿಸಿ ದ್ರಾಕ್ಷೇತೋಟ ವನ್ನು ಬೇರೆಯವರಿಗೆ ಕೊಡುವನು ಅಂದನು. ಅವರು ಇದನ್ನು ಕೇಳಿ--ಹಾಗೆ ಎಂದಿಗೂ ಆಗಬಾರದು ಅಂದರು.

17ಆಗ ಆತನು ಅವರನ್ನು ನೋಡಿ--ಹಾಗಾದರೆ ಮನೇ ಕಟ್ಟುವವರು ತಿರಸ್ಕರಿಸಿದ ಕಲ್ಲೇ ಮುಖ್ಯವಾದ ಮೂಲೆಗಲ್ಲಾಯಿತು ಎಂದು ಬರೆದಿರು ವದು ಏನು?

ಲೂಕನು 20 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी