ಧರ್ಮೋಪದೇಶಕಾಂಡ 29:6

ನಾನೇ ನಿಮ್ಮ ದೇವರಾದ ಕರ್ತನೆಂದು ನೀವು ತಿಳಿದುಕೊಳ್ಳುವ ಹಾಗೆ ನೀವು ರೊಟ್ಟಿ ತಿನ್ನಲಿಲ್ಲ; ದ್ರಾಕ್ಷಾರಸ ಇಲ್ಲವೆ ಮದ್ಯಗಳನ್ನು ಕುಡಿಯಲಿಲ್ಲ.

ಸಂದರ್ಭದೊಂದಿಗೆ ಓದಿ · ಧರ್ಮೋಪದೇಶಕಾಂಡ 29

4ಆದಾಗ್ಯೂ ಕರ್ತನು ನಿಮಗೆ ಇಂದಿನ ವರೆಗೂ ತಿಳುಕೊಳ್ಳುವ ಹೃದಯ ವನ್ನೂ ನೋಡುವ ಕಣ್ಣುಗಳನ್ನೂ ಕೇಳುವ ಕಿವಿಗಳನ್ನೂ ಕೊಡಲಿಲ್ಲ.

5ನಾನು ನಾಲ್ವತ್ತು ವರುಷ ನಿಮ್ಮನ್ನು ಅರಣ್ಯದಲ್ಲಿ ನಡಿಸಿದೆನು; ನಿಮ್ಮ ಮೇಲಿರುವ ವಸ್ತ್ರ ಗಳು ಹಳೇವಾಗಲಿಲ್ಲ; ನಿಮ್ಮ ಪಾದಗಳಲ್ಲಿರುವ ಕೆರಗಳು ಹಳೇವಾಗಲಿಲ್ಲ.

6ನಾನೇ ನಿಮ್ಮ ದೇವರಾದ ಕರ್ತನೆಂದು ನೀವು ತಿಳಿದುಕೊಳ್ಳುವ ಹಾಗೆ ನೀವು ರೊಟ್ಟಿ ತಿನ್ನಲಿಲ್ಲ; ದ್ರಾಕ್ಷಾರಸ ಇಲ್ಲವೆ ಮದ್ಯಗಳನ್ನು ಕುಡಿಯಲಿಲ್ಲ.

7ನೀವು ಈ ಸ್ಥಳಕ್ಕೆ ಬಂದಾಗ ಹೆಷ್ಬೋನಿನ ಅರಸನಾದ ಸೀಹೋನನೂ ಬಾಷಾನಿನ ಅರಸನಾದ ಓಗನೂ ನಮ್ಮೆದುರಿಗೆ ಯುದ್ಧಕ್ಕೆ ಬರಲಾಗಿ ನಾವು ಅವರನ್ನು ಹೊಡೆದು

8ಅವರ ದೇಶವನ್ನು ತಕ್ಕೊಂಡು ರೂಬೇನ್ಯರಿಗೂ ಗಾದನವರಿಗೂ ಮನಸ್ಸೆಯ ಅರ್ಧ ಗೋತ್ರಕ್ಕೂ ಸ್ವಾಸ್ತ್ಯವಾಗಿ ಕೊಟ್ಟೆವು.

ಧರ್ಮೋಪದೇಶಕಾಂಡ 29 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी