ವಿಮೋಚನಕಾಂಡ 29:30

ಅವನ ಬದಲಾಗಿ ಅವನ ಮಗನು ಯಾಜಕತ್ವವನ್ನು ನಡಿಸಿ ಪರಿಶುದ್ಧ ಸ್ಥಳದಲ್ಲಿ ಸೇವೆಮಾಡುವಂತೆ ಬರುವದಕ್ಕಿರುವವನು ಅವುಗಳನ್ನು ಏಳು ದಿನಗಳ ವರೆಗೆ ತೊಟ್ಟುಕೊಳ್ಳಬೇಕು.

ಸಂದರ್ಭದೊಂದಿಗೆ ಓದಿ · ವಿಮೋಚನಕಾಂಡ 29

28ಅದು ಆರೋನನಿಗೂ ಅವನ ಕುಮಾರರಿಗೂ ಇಸ್ರಾಯೇಲ್‌ ಮಕ್ಕಳಿಗೆ ನಿತ್ಯ ಕಟ್ಟಳೆಯಾಗಿರತಕ್ಕದ್ದು. ಯಾಕಂದರೆ ಅದು ಎತ್ತುವ ಅರ್ಪಣೆಯಾಗಿದೆ. ಇಸ್ರಾಯೇಲ್‌ ಮಕ್ಕಳಿಂದ ಎತ್ತುವ ಅರ್ಪಣೆಯೂ ಅವರ ಸಮಾ ಧಾನದ ಬಲಿಗಳ ಅರ್ಪಣೆಗಳಿಂದ ಅವರು ಕರ್ತನಿಗೆ ಎತ್ತುವ ಅರ್ಪಣೆಯೂ ಆಗಿರಬೇಕು.

29ಇದಲ್ಲದೆ ಆರೋನನಿಗೆ ಇದ್ದ ಪರಿಶುದ್ಧ ವಸ್ತ್ರಗಳು ಅವನ ತರುವಾಯ ಅವನ ಕುಮಾರರಿಗೆ ಆಗಬೇಕು. ಅವರು ಅವುಗಳನ್ನು ತೊಟ್ಟುಕೊಂಡು ಅಭಿಷೇಕಿಸಲ್ಪಟ್ಟು ಪ್ರತಿಷ್ಠಿಸಲ್ಪಡಬೇಕು.

30ಅವನ ಬದಲಾಗಿ ಅವನ ಮಗನು ಯಾಜಕತ್ವವನ್ನು ನಡಿಸಿ ಪರಿಶುದ್ಧ ಸ್ಥಳದಲ್ಲಿ ಸೇವೆಮಾಡುವಂತೆ ಬರುವದಕ್ಕಿರುವವನು ಅವುಗಳನ್ನು ಏಳು ದಿನಗಳ ವರೆಗೆ ತೊಟ್ಟುಕೊಳ್ಳಬೇಕು.

31ಪ್ರತಿಷ್ಠೆಯ ಟಗರನ್ನು ತೆಗೆದುಕೊಂಡು ನೀನು ಅದರ ಮಾಂಸವನ್ನು ಪರಿಶುದ್ಧ ಸ್ಥಳದಲ್ಲಿ ಬೇಯಿಸು.

32ಆರೋನನೂ ಅವನ ಕುಮಾರರೂ ಟಗರಿನ ಮಾಂಸ ವನ್ನೂ ಪುಟ್ಟಿಯಲ್ಲಿರುವ ರೊಟ್ಟಿಯನ್ನೂ ಸಭೆಯ ಗುಡಾ ರದ ಬಾಗಲಿನ ಬಳಿಯಲ್ಲಿ ಊಟಮಾಡಬೇಕು.

ವಿಮೋಚನಕಾಂಡ 29 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी