ಅರಣ್ಯಕಾಂಡ 13:27

ಅವರು ಅವ ನಿಗೆ--ನೀನು ನಮ್ಮನ್ನು ಕಳುಹಿಸಿದ ದೇಶಕ್ಕೆ ಹೋದೆವು. ಅದು ನಿಜವಾಗಿಯೂ ಹಾಲೂ ಜೇನೂ ಹರಿಯುವ ದೇಶವೇ; ಅದರ ಫಲವು ಇದೇ.

ಸಂದರ್ಭದೊಂದಿಗೆ ಓದಿ · ಅರಣ್ಯಕಾಂಡ 13

25ಅವರು ದೇಶವನ್ನು ಪಾಳತಿ ನೋಡಿ ನಾಲ್ವತ್ತು ದಿವಸಗಳಾದ ಮೇಲೆ ತಿರಿಗಿ ಬಂದರು.

26ಅವರು ಹೋಗಿ ಮೋಶೆ ಆರೋನರ ಬಳಿಗೂ ಇಸ್ರಾಯೇಲ್‌ ಮಕ್ಕಳ ಸಮಸ್ತ ಸಭೆಯ ಬಳಿಗೂ ಪಾರಾನ್‌ ಅರಣ್ಯದಲ್ಲಿರುವ ಕಾದೇಶಿಗೂ ಬಂದು ಅವರಿಗೂ ಸಮಸ್ತ ಸಭೆಗೂ ವಿಷಯವನ್ನು ವಿವರಿಸಿ ಆ ದೇಶದ ಫಲಗಳನ್ನು ಅವರಿಗೆ ತೋರಿಸಿದರು.

27ಅವರು ಅವ ನಿಗೆ--ನೀನು ನಮ್ಮನ್ನು ಕಳುಹಿಸಿದ ದೇಶಕ್ಕೆ ಹೋದೆವು. ಅದು ನಿಜವಾಗಿಯೂ ಹಾಲೂ ಜೇನೂ ಹರಿಯುವ ದೇಶವೇ; ಅದರ ಫಲವು ಇದೇ.

28ಆದರೆ ಆ ದೇಶದಲ್ಲಿ ವಾಸವಾಗಿರುವ ಜನರು ಬಲಿಷ್ಠರು; ಪಟ್ಟಣ ಗಳು ಭದ್ರವಾಗಿಯೂ ಬಹಳ ದೊಡ್ಡವುಗಳಾಗಿಯೂ ಅವೆ. ಮತ್ತು ಅನಾಕನ ಮಕ್ಕಳನ್ನು ಅಲ್ಲಿ ನಾವು ಕಂಡೆವು.

29ಅಮಾಲೇಕ್ಯರು ದೇಶದ ದಕ್ಷಿಣದಲ್ಲಿ ವಾಸವಾಗಿದ್ದಾರೆ; ಹಿತ್ತಿಯರು ಯೆಬೂಸಿಯರು ಅಮೋ ರಿಯರು ಪರ್ವತಗಳಲ್ಲಿಯೂ ಕಾನಾನ್ಯರು ಸಮುದ್ರದ ಬಳಿಯಲ್ಲಿಯೂ ಯೊರ್ದನಿನ ತೀರದಲ್ಲಿಯೂ ವಾಸ ವಾಗಿದ್ದಾರೆ ಎಂದು ಹೇಳಿದರು.

ಅರಣ್ಯಕಾಂಡ 13 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी