೨ ಅರಸುಗಳು 18:35

ಹಾಗಾದರೆ ಕರ್ತನು ಯೆರೂಸಲೇಮನ್ನು ನನ್ನ ಕೈಗೆ ತಪ್ಪಿಸಿ ಬಿಟ್ಟಾನೋ ಅಂದನು.

ಸಂದರ್ಭದೊಂದಿಗೆ ಓದಿ · ೨ ಅರಸುಗಳು 18

33ಜನಾಂಗಗಳ ದೇವರುಗಳಲ್ಲಿ ಯಾವ ನಾದರೂ ತನ್ನ ದೇಶವನ್ನು ಅಶ್ಶೂರಿನ ಅರಸನ ಕೈಗೆ ತಪ್ಪಿಸಿಬಿಟ್ಟದ್ದು ಉಂಟೋ?

34ಹಮಾತ್‌ ಅರ್ಫಾದು ಗಳ ದೇವರುಗಳು ಎಲ್ಲಿ? ಸೆಫರ್ವಯಿಮ್‌, ಹೇನ. ಇವ್ವಾಗಳ ದೇವರುಗಳು ಎಲ್ಲಿ? ಅವರು ನನ್ನ ಕೈಗೆ ಸಮಾರ್ಯವನ್ನು ತಪ್ಪಿಸಿಬಿಟ್ಟದ್ದು ಉಂಟೋ? ಈ ದೇಶಗಳ ದೇವರುಗಳಲ್ಲಿ ತಮ್ಮ ದೇಶವನ್ನು ನನ್ನ ಕೈಗೆ ತಪ್ಪಿಸಿ ಬಿಟ್ಟ ದೇವರುಗಳು ಯಾರು

35ಹಾಗಾದರೆ ಕರ್ತನು ಯೆರೂಸಲೇಮನ್ನು ನನ್ನ ಕೈಗೆ ತಪ್ಪಿಸಿ ಬಿಟ್ಟಾನೋ ಅಂದನು.

36ಆದರೆ ಜನರು ಅವನಿಗೆ ಪ್ರತ್ಯುತ್ತರವನ್ನು ಹೇಳದೆ ಸುಮ್ಮನಿದ್ದರು. ಯಾಕಂದರೆ ಅವನಿಗೆ ಪ್ರತ್ಯುತ್ತರ ಹೇಳಬೇಡಿ ಎಂದು ಅವರಿಗೆ ಅರಸನ ಆಜ್ಞೆ ಇತ್ತು.

37ಆಗ ಮನೆವಾರ್ತೆಯವನಾದ ಹಿಲ್ಕೀಯನ ಮಗನಾದ ಎಲ್ಯಾಕೀಮನೂ ಲೇಖಕನಾದ ಶೆಬ್ನನೂ ಸಂಪ್ರತಿಯವನಾದ ಆಸಾಫನ ಮಗನಾದ ಯೋವನೂ ತಮ್ಮ ವಸ್ತ್ರಗಳನ್ನು ಹರಿದುಕೊಂಡು ಹಿಜ್ಕೀಯನ ಬಳಿಗೆ ಬಂದು ರಬ್ಷಾಕೆಯು ಹೇಳಿದ ಮಾತುಗಳನ್ನು ಅವನಿಗೆ ತಿಳಿಸಿದರು.

೨ ಅರಸುಗಳು 18 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी