ಪ್ರಕಟನೆ 7:2

ಇದಲ್ಲದೆ ಮತ್ತೊಬ್ಬ ದೂತನು ಜೀವವುಳ್ಳ ದೇವರ ಮುದ್ರೆಯನ್ನು ಹಿಡಿದುಕೊಂಡು ಮೂಡಲದಿಂದ ಏರಿ ಬರುವದನ್ನು ಕಂಡೆನು. ಅವನು ಭೂಮಿಯನ್ನೂ ಸಮುದ್ರವನ್ನೂ ಕೆಡಿಸುವ ಅಧಿಕಾರ ಹೊಂದಿದ ಆ ನಾಲ್ಕು ಮಂದಿ ದೂತರಿಗೆ--

ಸಂದರ್ಭದೊಂದಿಗೆ ಓದಿ · ಪ್ರಕಟನೆ 7

1ಇವುಗಳಾದ ಮೇಲೆ ನಾಲ್ಕು ಮಂದಿ ದೂತರು ಭೂಮಿಯ ನಾಲ್ಕು ಮೂಲೆ ಗಳಲ್ಲಿ ನಿಂತುಕೊಂಡು ಭೂಮಿಯ ಮೇಲಾಗಲಿ ಸಮುದ್ರದ ಮೇಲಾಗಲಿ ಯಾವ ಮರದ ಮೇಲಾಗಲಿ ಗಾಳಿ ಬೀಸದಂತೆ ಭೂಮಿಯ ನಾಲ್ಕು ದಿಕ್ಕಿನ ಗಾಳಿ ಗಳನ್ನು ಹಿಡಿದಿರುವದನ್ನು ನಾನು ಕಂಡೆನು.

2ಇದಲ್ಲದೆ ಮತ್ತೊಬ್ಬ ದೂತನು ಜೀವವುಳ್ಳ ದೇವರ ಮುದ್ರೆಯನ್ನು ಹಿಡಿದುಕೊಂಡು ಮೂಡಲದಿಂದ ಏರಿ ಬರುವದನ್ನು ಕಂಡೆನು. ಅವನು ಭೂಮಿಯನ್ನೂ ಸಮುದ್ರವನ್ನೂ ಕೆಡಿಸುವ ಅಧಿಕಾರ ಹೊಂದಿದ ಆ ನಾಲ್ಕು ಮಂದಿ ದೂತರಿಗೆ--

3ನಾವು ನಮ್ಮ ದೇವರ ಸೇವಕರ ಹಣೆಗಳಲ್ಲಿ ಮುದ್ರಿಸುವ ತನಕ ಭೂಮಿಯನ್ನಾಗಲಿ ಸಮುದ್ರವನ್ನಾಗಲಿ ಮರಗಳನ್ನಾಗಲಿ ಕೆಡಿಸಬೇಡಿರಿ ಎಂದು ಮಹಾಶಬ್ದದಿಂದ ಕೂಗುತ್ತಾ ಹೇಳಿದನು.

4ಮುದ್ರೆ ಹೊಂದಿದವರ ಸಂಖ್ಯೆಯನ್ನು ನಾನು ಕೇಳಿದೆನು; ಇಸ್ರಾಯೇಲ್ಯನ ಮಕ್ಕಳ ಗೋತ್ರದವರಲ್ಲಿ ಮುದ್ರೆಯನ್ನು ಹೊಂದಿದವರು ಒಂದು ಲಕ್ಷ ನಾಲ್ವತ್ತು ನಾಲ್ಕು ಸಾವಿರ.

ಪ್ರಕಟನೆ 7 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी