ಯೆಹೋಶುವ 4:6

ಇದು ನಿಮ್ಮ ಮಧ್ಯದಲ್ಲಿ ಗುರುತಾಗಿರಬೇಕು; ಬರುವ ಕಾಲದಲ್ಲಿ ನಿಮ್ಮ ಮಕ್ಕಳು ನಿಮ್ಮನ್ನು ಈ ಕಲ್ಲುಗಳೇನೆಂದು ಕೇಳಿದಾಗ

ಸಂದರ್ಭದೊಂದಿಗೆ ಓದಿ · ಯೆಹೋಶುವ 4

4ಆಗ ಯೆಹೋಶುವನು ಇಸ್ರಾ ಯೇಲ್‌ ಮಕ್ಕಳಲ್ಲಿ ಒಂದೊಂದು ಗೋತ್ರಕ್ಕೆ ಒಬ್ಬೊಬ್ಬನ ಪ್ರಕಾರ ತಾನು ಏರ್ಪಡಿಸಿದ ಹನ್ನೆರಡು ಮಂದಿಯನ್ನು ಕರೆದನು.

5ಯೆಹೋಶುವನು ಅವರಿಗೆ--ನೀವು ಯೊರ್ದನಿನ ಮಧ್ಯದಲ್ಲಿ ನಿಮ್ಮ ದೇವರಾದ ಕರ್ತನ ಮಂಜೂಷದ ಮುಂದೆ ಇಸ್ರಾಯೇಲ್‌ ಮಕ್ಕಳ ಗೋತ್ರ ಗಳ ಲೆಕ್ಕಕ್ಕೆ ಸರಿಯಾಗಿ ಒಬ್ಬೊಬ್ಬನು ಒಂದೊಂದು ಕಲ್ಲನ್ನು ಹೆಗಲ ಮೇಲೆ ಹೊತ್ತುಕೊಂಡು ಹೋಗಿರಿ.

6ಇದು ನಿಮ್ಮ ಮಧ್ಯದಲ್ಲಿ ಗುರುತಾಗಿರಬೇಕು; ಬರುವ ಕಾಲದಲ್ಲಿ ನಿಮ್ಮ ಮಕ್ಕಳು ನಿಮ್ಮನ್ನು ಈ ಕಲ್ಲುಗಳೇನೆಂದು ಕೇಳಿದಾಗ

7ನೀವು ಅವರಿಗೆ--ಯೊರ್ದನಿನ ನೀರು ಕರ್ತನ ಒಡಂಬಡಿಕೆಯ ಮಂಜೂಷದ ಮುಂದೆ ವಿಭಾಗಿಸಲ್ಪಟ್ಟಿತು; ಅದು ಯೊರ್ದನನ್ನು ದಾಟುವಾಗ ಯೊರ್ದನಿನ ನೀರು ಭೇದಿಸಲ್ಪಟ್ಟಿತ್ತು. ಈ ಕಲ್ಲುಗಳು ಇಸ್ರಾಯೇಲ್‌ ಮಕ್ಕಳಿಗೆ ಎಂದೆಂದಿಗೂ ಜ್ಞಾಪಕಾರ್ಥ ವಾದ ಗುರುತಾಗಿರುವವು ಎಂದು ಉತ್ತರ ಕೊಡಬೇಕು ಅಂದನು.

8ಆಗ ಇಸ್ರಾಯೇಲ್‌ ಮಕ್ಕಳು ಯೆಹೋಶುವನು ಆಜ್ಞಾಪಿಸಿದ ಹಾಗೆ ಮಾಡಿದರು; ಕರ್ತನು ಯೆಹೋಶುವನಿಗೆ ಹೇಳಿದ ಪ್ರಕಾರ ಇಸ್ರಾ ಯೇಲ್‌ ಮಕ್ಕಳ ಗೋತ್ರಗಳ ಲೆಕ್ಕಕ್ಕೆ ಸರಿಯಾಗಿ ಹನ್ನೆರಡು ಕಲ್ಲುಗಳನ್ನು ಯೊರ್ದನಿನ ಮಧ್ಯದಿಂದ ತೆಗೆದುಕೊಂಡು ಅವುಗಳನ್ನು ತಮ್ಮ ಸಂಗಡ ತಂದು ತಾವು ಇಳಿದುಕೊಂಡ ಸ್ಥಳದಲ್ಲಿ ಅವುಗಳನ್ನು ನಿಲ್ಲಿಸಿ ದರು.

ಯೆಹೋಶುವ 4 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी