ಯೆಶಾಯ 66:15

ಇಗೋ, ಕರ್ತನು ಬೆಂಕಿಯೊಡನೆ ಬರುವನು. ಆತನ ರಥಗಳು ಬಿರುಗಾಳಿಯ ಹಾಗೆ ಇರುವವು; ಉಗ್ರದಿಂದ ತನ್ನ ಕೋಪವನ್ನೂ ಅಗ್ನಿಜ್ವಾಲೆಗಳಿಂದ ತನ್ನ ಗದರಿಕೆ ಯನ್ನೂ ಸಲ್ಲಿಸುವದಕ್ಕಾಗಿಯೇ ಬರುವನು.

ಸಂದರ್ಭದೊಂದಿಗೆ ಓದಿ · ಯೆಶಾಯ 66

13ಒಬ್ಬ ನನ್ನು ಅವನ ತಾಯಿ ಆದರಿಸುವ ಪ್ರಕಾರವೇ ನಾನು ನಿಮ್ಮನ್ನು ಆದರಿಸುವೆನು; ಯೆರೂಸಲೇಮಿನಲ್ಲಿ ಆದ ರಣೆ ಹೊಂದುವಿರಿ.

14ನೀವು ಅದನ್ನು ನೋಡುವಾಗ ನಿಮ್ಮ ಹೃದಯವು ಸಂತೋಷಿಸುವದು, ನಿಮ್ಮ ಎಲುಬು ಗಳು ಹಸಿರು ಪಲ್ಯದ ಹಾಗೆ ಚಿಗುರುವವು; ಕರ್ತನ ಕೈ ಆತನ ಸೇವಕನ ಕಡೆಗೂ ಆತನ ರೌದ್ರವು ಆತನ ಶತ್ರುಗಳ ಕಡೆಗೂ ಕಾಣಬರುವದು.

15ಇಗೋ, ಕರ್ತನು ಬೆಂಕಿಯೊಡನೆ ಬರುವನು. ಆತನ ರಥಗಳು ಬಿರುಗಾಳಿಯ ಹಾಗೆ ಇರುವವು; ಉಗ್ರದಿಂದ ತನ್ನ ಕೋಪವನ್ನೂ ಅಗ್ನಿಜ್ವಾಲೆಗಳಿಂದ ತನ್ನ ಗದರಿಕೆ ಯನ್ನೂ ಸಲ್ಲಿಸುವದಕ್ಕಾಗಿಯೇ ಬರುವನು.

16ಬೆಂಕಿ ಯಿಂದಲೂ ತನ್ನ ಕತ್ತಿಯಿಂದಲೂ ಕರ್ತನು ಮನುಷ್ಯ ರಿಗೆಲ್ಲಾ ನ್ಯಾಯತೀರಿಸುವನು; ಕರ್ತನಿಂದ ಕೊಲ್ಲಲ್ಪಟ್ಟ ವರು ಅನೇಕರಾಗಿರುವರು.

17ತೋಟಗಳ ಮಧ್ಯದಲ್ಲಿ ಒಂದು ಮರದ ಹಿಂದೆ ತಮ್ಮನ್ನು ಪರಿಶುದ್ಧ ಮಾಡಿ ಕೊಂಡು ಪವಿತ್ರಮಾಡಿಕೊಳ್ಳುವವರೂ ಹಂದಿ ಮಾಂಸವನ್ನೂ ಅಸಹ್ಯವಾದದ್ದನ್ನೂ ಇಲಿಯನ್ನೂ ತಿನ್ನು ವವರೂ ಒಟ್ಟಾಗಿ ದಹಿಸಲ್ಪಡುವರು ಎಂದು ಕರ್ತನು ಹೇಳುತ್ತಾನೆ.

ಯೆಶಾಯ 66 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी