ಮತ್ತಾಯನು 6:18

ಆಗ ನೀನು ಉಪವಾಸಮಾಡುತ್ತೀ ಎಂದು ಜನರಿಗೆ ಕಾಣದಿದ್ದರೂ ಅಂತರಂಗದಲ್ಲಿರುವ ನಿನ್ನ ತಂದೆಗೆ ಕಾಣುವದು. ಮತ್ತು ಅಂತರಂಗದಲ್ಲಿ ನೋಡುವ ನಿನ್ನ ತಂದೆಯು ಬಹಿರಂಗವಾಗಿ ನಿನಗೆ ಪ್ರತಿಫಲ ಕೊಡುವನು.

ಸಂದರ್ಭದೊಂದಿಗೆ ಓದಿ · ಮತ್ತಾಯನು 6

16ಇದಲ್ಲದೆ ನೀವು ಉಪವಾಸ ಮಾಡುವಾಗ ಕಪಟಿಗಳ ಹಾಗೆ ವ್ಯಸನದ ಮುಖ ಮಾಡಿಕೊಳ್ಳ ಬೇಡಿರಿ. ಯಾಕಂದರೆ ತಾವು ಉಪವಾಸವಾಗಿ ದ್ದೇವೆಂದು ಜನರಿಗೆ ತೋರುವಂತೆ ಅವರು ತಮ್ಮ ಮುಖಗಳನ್ನು ವಿಕಾರ ಮಾಡಿಕೊಳ್ಳುತ್ತಾರೆ. ನಾನು ನಿಮಗೆ ನಿಜವಾಗಿ ಹೇಳುವದೇನಂದರೆ--ಅವರು ತಮ್ಮ ಪ್ರತಿ

17ಆದರೆ ನೀನು ಉಪವಾಸ ಮಾಡುವಾಗ ನಿನ್ನ ತಲೆಗೆ ಎಣ್ಣೆ ಹಚ್ಚಿಕೊಂಡು ನಿನ್ನ ಮುಖವನ್ನು ತೊಳೆದುಕೋ.

18ಆಗ ನೀನು ಉಪವಾಸಮಾಡುತ್ತೀ ಎಂದು ಜನರಿಗೆ ಕಾಣದಿದ್ದರೂ ಅಂತರಂಗದಲ್ಲಿರುವ ನಿನ್ನ ತಂದೆಗೆ ಕಾಣುವದು. ಮತ್ತು ಅಂತರಂಗದಲ್ಲಿ ನೋಡುವ ನಿನ್ನ ತಂದೆಯು ಬಹಿರಂಗವಾಗಿ ನಿನಗೆ ಪ್ರತಿಫಲ ಕೊಡುವನು.

19ಭೂಲೋಕದಲ್ಲಿ ನಿಮಗೋಸ್ಕರ ಸಂಪತ್ತನ್ನು ಕೂಡಿಸಿಟ್ಟುಕೊಳ್ಳಬೇಡಿರಿ; ಇಲ್ಲಿ ನುಸಿಯೂ ಕಿಲುಬೂ ಅದನ್ನು ಹಾಳುಮಾಡುವದು; ಮತ್ತು ಕಳ್ಳರು ಕನ್ನಾ ಕೊರೆದು ಕದಿಯುವರು.

20ಆದರೆ ನಿಮ್ಮ ಗೋಸ್ಕರ ಪರಲೋಕದಲ್ಲಿ ಸಂಪತ್ತನ್ನು ಕೂಡಿಸಿಟ್ಟುಕೊಳ್ಳಿರಿ; ಅಲ್ಲಿ ನುಸಿಯೂ ಕಿಲುಬೂ ಅದನ್ನು ಹಾಳು ಮಾಡುವದಿಲ್ಲ; ಮತ್ತು ಕಳ್ಳರು ಕನ್ನಾ ಕೊರೆದು ಕದಿಯುವದೂ ಇಲ್ಲ.

ಮತ್ತಾಯನು 6 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी