ನೆಹೆಮಿಯ 9:9

ಇದಲ್ಲದೆ ಐಗುಪ್ತದಲ್ಲಿ ನಮ್ಮ ಪಿತೃಗಳ ದೀನ ಸ್ಥಿತಿಯನ್ನು ನೋಡಿದಿ; ಕೆಂಪುಸಮುದ್ರದ ಬಳಿಯಲ್ಲಿ ಅವರ ಕೂಗನ್ನು ಕೇಳಿದಿ.

ಸಂದರ್ಭದೊಂದಿಗೆ ಓದಿ · ನೆಹೆಮಿಯ 9

7ನೀನು ಅಬ್ರಾಮನನ್ನು ಆದು ಕೊಂಡ ದೇವರಾಗಿರುವ ಕರ್ತನು. ನೀನು ಅವನನ್ನು ಊರ್‌ ಎಂಬ ಕಸ್ದೀಯರ ಪಟ್ಟಣದಿಂದ ಹೊರಗೆ ಬರಮಾಡಿ ಅವನಿಗೆ ಅಬ್ರಹಾಮ್‌ ಎಂದು ಹೆಸರಿಟ್ಟು

8ಅವನ ಹೃದಯವು ನಿನ್ನ ಮುಂದೆ ನಂಬಿಕೆಯುಳ್ಳದ್ದೆಂದು ಕಂಡುಕೊಂಡು ಕಾನಾನ್ಯರೂ ಹಿತ್ತಿಯರೂ ಅಮೋರಿ ಯರೂ ಪೆರಿಜ್ಜೀಯರೂ ಯೆಬೂಸಿಯರೂ ಗಿರ್ಗಾಷಿ ಯರೂ ಇವರ ದೇಶವನ್ನು ಅವನ ಸಂತಾನಕ್ಕೆ ಕೊಡುವ ಹಾಗೆ ಅವನ ಸಂಗಡ ಒಡಂಬಡಿಕೆಯನ್ನು ಮಾಡಿದಿ; ನೀನು ಸತ್ಯವಂತನಾಗಿರುವದರಿಂದ ನಿನ್ನ ವಾಕ್ಯಗಳನ್ನು ಈಡೇರಿಸಿದಿ.

9ಇದಲ್ಲದೆ ಐಗುಪ್ತದಲ್ಲಿ ನಮ್ಮ ಪಿತೃಗಳ ದೀನ ಸ್ಥಿತಿಯನ್ನು ನೋಡಿದಿ; ಕೆಂಪುಸಮುದ್ರದ ಬಳಿಯಲ್ಲಿ ಅವರ ಕೂಗನ್ನು ಕೇಳಿದಿ.

10ಫರೋಹನ ಮೇಲೆಯೂ ಅವನ ಸಮಸ್ತ ಸೇವಕರ ಮೇಲೆಯೂ ಅವನ ಸಮಸ್ತ ದೇಶದ ಜನರ ಮೇಲೆಯೂ ಸೂಚ ಕಕಾರ್ಯಗಳನ್ನೂ ಅದ್ಭುತಗಳನ್ನೂ ತೋರಿಸಿದಿ. ಯಾಕಂದರೆ ಇವರು ಅವರಿಗೆ ಅಹಂಕಾರಿಗಳಾಗಿ ನಡೆದರೆಂದು ತಿಳಿದಿದ್ದಿ. ಈ ಪ್ರಕಾರವೇ ನೀನು ಇಂದಿನ ಹಾಗೆ ನಿನಗೆ ಹೆಸರನ್ನು ಮಾಡಿಕೊಂಡಿದ್ದೀ.

11ನೀನು ಅವರ ಮುಂದೆ ಸಮುದ್ರವನ್ನು ವಿಭಾಗಿಸಿದ್ದರಿಂದ ಅವರು ಸಮುದ್ರದ ಮಧ್ಯದಲ್ಲಿ ಒಣ ಭೂಮಿಯಲ್ಲಿ ಹಾದುಹೋದರು. ಆದರೆ ಅವರನ್ನು ಹಿಂದಟ್ಟಿದವರನ್ನು ಅಗಾಧಗಳಲ್ಲಿ ಕಲ್ಲಿನ ಹಾಗೆ ಮಹಾ ಜಲರಾಶಿಗಳಲ್ಲಿ ದೊಬ್ಬಿ ಬಿಟ್ಟಿ.

ನೆಹೆಮಿಯ 9 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी