೧ ಅರಸುಗಳು 20:15

ಅವನು ಪ್ರಾಂತಗಳ ಪ್ರಧಾನರ ಯೌವನಸ್ಥರನ್ನು ಲೆಕ್ಕ ಮಾಡಿದಾಗ ಅವರು ಇನ್ನೂರ ಮೂವತ್ತೆರಡು ಜನರಾಗಿದ್ದರು. ಅವರ ತರುವಾಯ ಇಸ್ರಾಯೇಲ್‌ ಮಕ್ಕಳಾದ ಸಕಲ ಜನರನ್ನು ಲೆಕ್ಕ ಮಾಡಿದಾಗ ಏಳು ಸಾವಿರ ಜನರಾಗಿದ್ದರು.

ಸಂದರ್ಭದೊಂದಿಗೆ ಓದಿ · ೧ ಅರಸುಗಳು 20

13ಆಗ ಇಗೋ, ಒಬ್ಬ ಪ್ರವಾದಿಯು ಇಸ್ರಾಯೇ ಲಿನ ಅರಸನಾದ ಅಹಾಬನ ಬಳಿಗೆ ಬಂದು--ಈ ದೊಡ್ಡ ಗುಂಪನ್ನು ನೋಡಿದಿಯೋ? ಇಗೋ, ನಾನೇ ಕರ್ತನೆಂದು ನೀನು ತಿಳಿಯುವ ಹಾಗೆ ಈ ಹೊತ್ತು ಅದನ್ನು ನಿನ್ನ ಕೈಯಲ್ಲಿ ಒಪ್ಪಿಸಿಕೊಡುವೆನೆಂದು ಕರ್ತನು ಹೇಳುತ್ತಾನೆ ಅಂದನು.

14ಅಹಾಬನು--ಯಾರ ಕೈ ಯಿಂದ ಅಂದನು. ಅದಕ್ಕವನು ಪ್ರಾಂತ್ಯಗಳ ಪ್ರಧಾ ನರ ಯೌವನಸ್ಥರಿಂದಲೇ ಎಂದು ಕರ್ತನು ಹೇಳು ತ್ತಾನೆ ಅಂದನು. ಆಗ ಅವನು--ಯುದ್ಧ ನಡಿಸುವವನು ಯಾರು ಅಂದನು. ಅದಕ್ಕವನು--ನೀನೇ ಅಂದನು.

15ಅವನು ಪ್ರಾಂತಗಳ ಪ್ರಧಾನರ ಯೌವನಸ್ಥರನ್ನು ಲೆಕ್ಕ ಮಾಡಿದಾಗ ಅವರು ಇನ್ನೂರ ಮೂವತ್ತೆರಡು ಜನರಾಗಿದ್ದರು. ಅವರ ತರುವಾಯ ಇಸ್ರಾಯೇಲ್‌ ಮಕ್ಕಳಾದ ಸಕಲ ಜನರನ್ನು ಲೆಕ್ಕ ಮಾಡಿದಾಗ ಏಳು ಸಾವಿರ ಜನರಾಗಿದ್ದರು.

16ಅವರು ಮಧ್ಯಾಹ್ನದಲ್ಲಿ ಹೊರಟರು; ಆದರೆ ಬೆನ್ಹದದನೂ ಅವನ ಸಹಾಯ ಕರಾದ ಮೂವತ್ತೆರಡು ಮಂದಿ ಅರಸುಗಳೂ ಕೂಡ ಡೇರೆಗಳಲ್ಲಿ ಅಮಲೇರುವ ಹಾಗೆ ಕುಡಿಯುತ್ತಾ ಇದ್ದರು.

17ಪ್ರಾಂತಗಳ ಪ್ರಧಾನರ ಸೇವಕರು ಮೊದಲು ಸೈನ್ಯವಾಗಿ ಹೊರಡುವಾಗ ಬೆನ್ಹದದನು ಮನುಷ್ಯರನ್ನು ಕಳುಹಿಸಿದನು. ಅವರು ತಿರಿಗಿ ಬಂದು --ಸಮಾರ್ಯದಿಂದ ಮನುಷ್ಯರು ಬಂದಿದ್ದಾರೆಂದು ಅವನಿಗೆ ತಿಳಿಸಿದರು.

೧ ಅರಸುಗಳು 20 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी