ಧರ್ಮೋಪದೇಶಕಾಂಡ 20:9

ಅಧಿಕಾರಿ ಗಳು ಜನರ ಸಂಗಡ ಮಾತನಾಡಿ ಮುಗಿಸಿದಾಗ ಜನರ ಮುಂದೆ ನಡೆಯತಕ್ಕ ಸೈನ್ಯಾಧಿಪತಿಗಳನ್ನು ನೇಮಿಸಬೇಕು.

ಸಂದರ್ಭದೊಂದಿಗೆ ಓದಿ · ಧರ್ಮೋಪದೇಶಕಾಂಡ 20

7ಹೆಂಡತಿ ಯನ್ನು ನಿಶ್ಚಯಿಸಿಕೊಂಡು ಆಕೆಯನ್ನು ಮದುವೆ ಮಾಡಿಕೊಳ್ಳದ ಮನುಷ್ಯನು ಹಿಂತಿರುಗಿ ಮನೆಗೆ ಹೋಗಲಿ ಯುದ್ಧದಲ್ಲಿ ಸಾಯಲಾಗಿ ಮತ್ತೊಬ್ಬನು ಅವಳನ್ನು ಸೇರಿಸಿಕೊಂಡಾನು ಎಂದು ಹೇಳಬೇಕು.

8ಇದಲ್ಲದೆ ಅಧಿಕಾರಿಗಳು ಜನಕ್ಕೆ ಮತ್ತೆ--ಭಯಸ್ತನಾಗಿ ಬಳಲಿಹೋದ ಹೃದಯವುಳ್ಳ ಮನುಷ್ಯನು ಯಾವನು? ತನ್ನ ಹೃದಯದಂತೆ ತನ್ನ ಸಹೋದರರ ಹೃದಯವು ಬಳಲಿಹೋಗದ ಹಾಗೆ ಅವನು ತಿರುಗಿಕೊಂಡು ತನ್ನ ಮನೆಗೆ ಹೋಗಲಿ ಎಂದು ಹೇಳಬೇಕು.

9ಅಧಿಕಾರಿ ಗಳು ಜನರ ಸಂಗಡ ಮಾತನಾಡಿ ಮುಗಿಸಿದಾಗ ಜನರ ಮುಂದೆ ನಡೆಯತಕ್ಕ ಸೈನ್ಯಾಧಿಪತಿಗಳನ್ನು ನೇಮಿಸಬೇಕು.

10ನೀನು ಯುದ್ಧಮಾಡುವ ನಿಮಿತ್ತ ಒಂದು ಪಟ್ಟ ಣದ ಹತ್ತಿರ ಬಂದರೆ ಸಮಾಧಾನಕ್ಕಾಗಿ ಅದನ್ನು ಕರೆಯಬೇಕು.

11ಆ ಪಟ್ಟಣವು ನಿನಗೆ ಸಮಾಧಾನದ ಉತ್ತರ ಕೊಟ್ಟು ಬಾಗಲನ್ನು ತೆರೆದರೆ ಅದರಲ್ಲಿರುವ ಜನರೆಲ್ಲರು ನಿನಗೆ ಕಪ್ಪಕೊಟ್ಟು ನಿನ್ನನ್ನು ಸೇವಿಸಬೇಕು.

ಧರ್ಮೋಪದೇಶಕಾಂಡ 20 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी