ವಿಮೋಚನಕಾಂಡ 34:23

ವರುಷಕ್ಕೆ ಮೂರುಸಾರಿ ನಿಮ್ಮ ಗಂಡು ಮಕ್ಕಳೆಲ್ಲಾ ಕರ್ತನಾದ ದೇವರ ಮುಂದೆ ಅಂದರೆ ಇಸ್ರಾಯೇಲಿನ ದೇವರ ಮುಂದೆ ಬರಬೇಕು.

ಸಂದರ್ಭದೊಂದಿಗೆ ಓದಿ · ವಿಮೋಚನಕಾಂಡ 34

21ಆರು ದಿನಗಳು ಕೆಲಸಮಾಡಿ ಏಳನೆಯ ದಿನದಲ್ಲಿ ವಿಶ್ರಮಿಸಿಕೊಳ್ಳಬೇಕು. ಬಿತ್ತುವ ಕಾಲದಲ್ಲಿಯೂ ಕೊಯ್ಯುವ ಕಾಲದಲ್ಲಿಯೂ (ಏಳನೆಯ ದಿನದಲ್ಲಿ) ವಿಶ್ರಮಿಸಿಕೊಳ್ಳಬೇಕು.

22ಪ್ರಥಮ ಗೋದಿ ಸುಗ್ಗಿಯ ವಾರಗಳ ಹಬ್ಬವನ್ನೂ ಸಂವತ್ಸರದ ಕೊನೆಯಲ್ಲಿ (ಬೆಳೆ) ಸಂಗ್ರಹದ ಹಬ್ಬ ವನ್ನೂ ಆಚರಿಸಬೇಕು.

23ವರುಷಕ್ಕೆ ಮೂರುಸಾರಿ ನಿಮ್ಮ ಗಂಡು ಮಕ್ಕಳೆಲ್ಲಾ ಕರ್ತನಾದ ದೇವರ ಮುಂದೆ ಅಂದರೆ ಇಸ್ರಾಯೇಲಿನ ದೇವರ ಮುಂದೆ ಬರಬೇಕು.

24ನಾನು ಜನಾಂಗಗಳನ್ನು ನಿಮ್ಮ ಎದುರಿನಿಂದ ಹೊರ ಡಿಸಿಬಿಟ್ಟು ನಿಮ್ಮ ಮೇರೆಗಳನ್ನು ವಿಸ್ತಾರಮಾಡುವೆನು. ವರುಷಕ್ಕೆ ಮೂರು ಸಾರಿ ನೀವು ನಿಮ್ಮ ದೇವರಾದ ಕರ್ತನ ಸನ್ನಿಧಿಗೆ ಹೋಗುವ ಸಮಯದಲ್ಲಿ ಯಾರೂ ನಿಮ್ಮ ದೇಶವನ್ನು ಆಶಿಸರು.

25ನನ್ನ ಬಲಿಯ ರಕ್ತವನ್ನು ಹುಳಿಹಿಟ್ಟಿನ ಸಂಗಡ ಅರ್ಪಿಸಬಾರದು. ಇಲ್ಲವೆ ಪಸ್ಕ ಹಬ್ಬದ ಬಲಿಯನ್ನು ಬೆಳಗಿನ ವರೆಗೂ ಉಳಿಸಬಾರದು.

ವಿಮೋಚನಕಾಂಡ 34 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी