ಯೆಶಾಯ 42:18

ಕಿವುಡರೇ, ಕೇಳಿರಿ; ಕುರುಡರೇ ನೀವು ದೃಷ್ಟಿಸಿ ನೋಡಿರಿ.

ಸಂದರ್ಭದೊಂದಿಗೆ ಓದಿ · ಯೆಶಾಯ 42

16ಕುರುಡರನ್ನು ಅವರು ತಿಳಿಯದ ಮಾರ್ಗದಲ್ಲಿ ಬರಮಾಡುವೆನು. ಅವರನ್ನು ತಿಳಿಯದ ಹಾದಿಗಳಲ್ಲಿ ನಡಿಸುವೆನು; ಕತ್ತಲೆಯನ್ನು ಅವರ ಮುಂದೆ ಬೆಳಕಾಗಿಯೂ ಸೊಟ್ಟಾದವುಗಳನ್ನು ನೆಟ್ಟಗಾಗಿಯೂ ಮಾಡುವೆನು. ಇವುಗಳನ್ನು ನಾನು ಅವರಿಗೋಸ್ಕರ ಮಾಡುವೆನು. ನಾನು ಅವರನ್ನು ಕೈಬಿಡುವದಿಲ್ಲ.

17ಕೆತ್ತಿದ ವಿಗ್ರಹಗಳಲ್ಲಿ ನಂಬಿಕೆಯಿಡುವವರು ಎರಕಹೊಯ್ದ ವಿಗ್ರಹಗಳಿಗೆ ನೀವೇ ನಮ್ಮ ದೇವರುಗಳೆಂದು ಹೇಳುವ ವರು ಹಿಂದೆ ಬಿದ್ದು ನಾಚಿಕೆಗೆ ಈಡಾಗುವರು.

18ಕಿವುಡರೇ, ಕೇಳಿರಿ; ಕುರುಡರೇ ನೀವು ದೃಷ್ಟಿಸಿ ನೋಡಿರಿ.

19ನನ್ನ ಸೇವಕನಲ್ಲದೆ ಕುರುಡನು ಯಾರು? ಇಲ್ಲವೆ ನಾನು ಕಳುಹಿಸಿದ ಸೇವಕನಲ್ಲದೇ ಕಿವುಡನು ಯಾರು? ಸಂಪೂರ್ಣನಂತೆ ಕುರುಡನು ಯಾರು? ಕರ್ತನ ಸೇವಕನಂತೆ ಕುರುಡನು ಯಾರು?

20ನೀನು ಅನೇಕ ಸಂಗತಿಗಳನ್ನು ಕಂಡಿದ್ದರೂ ನಿನಗೆ ಗಮನವಿಲ್ಲ; ಅವನ ಕಿವಿಗಳು ತೆರೆದಿದ್ದರೂ ಕೇಳನು.

ಯೆಶಾಯ 42 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी