ಸೆರೆಯವನು ತಾನು ಕುಣಿಯಲ್ಲಿ ಸಾಯದಂತೆಯೂ ಇಲ್ಲವೆ ತನಗೆ ಆಹಾರದ ಕೊರತೆ ಇರದಂತೆಯೂ ತಾನು ಬಿಡುಗಡೆ ಹೊಂದುವಂತೆಯೂ ಆತುರಪಡುತ್ತಾನೆ.
12ನಾನೇ, ನಾನೇ ನಿನ್ನನ್ನು ಆದರಿಸುವವನಾಗಿ ದ್ದೇನೆ; ಹಾಗಾದರೆ ಸಾಯುವ ಮನುಷ್ಯನಿಗೂ ಹುಲ್ಲಿನಂತೆ ಮಾಡಲ್ಪಟ್ಟಿರುವ ನರಪುತ್ರನಿಗೂ ಭಯ ಪಡುವ ನೀನು ಯಾರು?
13ಆಕಾಶವನ್ನು ಹಾಸಿ, ಭೂಮಿಗೆ ಅಸ್ತಿವಾರವನ್ನು ಹಾಕಿ, ನಿನ್ನನ್ನು ಉಂಟು ಮಾಡಿದ ಕರ್ತನನ್ನು ನೀನು ಮರೆತುಬಿಟ್ಟು ಹಿಂಸಕನ ಉಗ್ರಕ್ಕೆ ಎಡೆಬಿಡದೆ ಪ್ರತಿದಿನವೂ ಅವನು ನಾಶ ಪಡಿಸುವನೋ ಎಂಬಂತೆ ಅಂಜಿಕೊಂಡಿದ್ದಿಯಲ್ಲಾ? ಮತ್ತು ಆ ಹಿಂಸಕನ ಉಗ್ರವು ಎಲ್ಲಿ?
14ಸೆರೆಯವನು ತಾನು ಕುಣಿಯಲ್ಲಿ ಸಾಯದಂತೆಯೂ ಇಲ್ಲವೆ ತನಗೆ ಆಹಾರದ ಕೊರತೆ ಇರದಂತೆಯೂ ತಾನು ಬಿಡುಗಡೆ ಹೊಂದುವಂತೆಯೂ ಆತುರಪಡುತ್ತಾನೆ.
15ಆದರೆ ತೆರೆಗಳು ಭೋರ್ಗರೆಯುವಾಗ ಸಮುದ್ರವನ್ನು ವಿಭಾಗಿ ಸಿದ ನಿನ್ನ ದೇವರಾಗಿರುವ ಕರ್ತನು ನಾನೇ; ಸೈನ್ಯಗಳ ಕರ್ತನು ಎಂಬದು ಆತನ ಹೆಸರು.
16ಆಕಾಶಗಳನ್ನು ನಿಲ್ಲಿಸುವದಕ್ಕೂ ಭೂಮಿಗೆ ಅಸ್ತಿವಾರವನ್ನು ಹಾಕುವ ದಕ್ಕೂ ಚೀಯೋನಿಗೆ ನೀನು ನನ್ನ ಜನರೆಂದು ಹೇಳುವ ದಕ್ಕೂ ನನ್ನ ವಾಕ್ಯಗಳನ್ನು ನಿನ್ನ ಬಾಯಲ್ಲಿಟ್ಟು ನನ್ನ ಕೈ ನೆರಳಿನಿಂದ ನಿನ್ನನ್ನು ಮುಚ್ಚಿದ್ದೇನೆ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ