ಅಪೊಸ್ತಲರ ಕೃತ್ಯಗಳು 13:13

ತರುವಾಯ ಪೌಲನೂ ಅವನ ಜೊತೆ ಯಲ್ಲಿದ್ದವರೂ ಪಾಫೋಸನ್ನು ಬಿಟ್ಟು ಪಂಪುಲ್ಯದಲ್ಲಿದ್ದ ಪೆರ್ಗೆಗೆ ಬಂದರು; ಯೋಹಾನನು ಅವರನ್ನು ಬಿಟ್ಟು ಹಿಂತಿರುಗಿ ಯೆರೂಸಲೇಮಿಗೆ ಹೋದನು;

ಸಂದರ್ಭದೊಂದಿಗೆ ಓದಿ · ಅಪೊಸ್ತಲರ ಕೃತ್ಯಗಳು 13

11ಇಗೋ, ಕರ್ತನು ನಿನ್ನ ಮೇಲೆ ಕೈ ಎತ್ತಿದ್ದಾನೆ; ನೀನು ಕುರುಡನಾಗಿ ಕೆಲವು ಕಾಲ ಸೂರ್ಯನನ್ನು ಕಾಣದೆ ಇರುವಿ ಎಂದು ಹೇಳಿದನು. ಆ ಕ್ಷಣವೇ ಅವನಿಗೆ ಮೊಬ್ಬಾಗಿ ಕತ್ತಲೆ ಉಂಟಾಯಿತು; ಅವನು ಕೈ ಹಿಡಿದು ನಡಿಸುವವರನ್ನು ಹುಡುಕುತ್ತಾ ತಿರುಗಾಡಿದನು.

12ಆಗ ಅಧಿಪತಿಯು ನಡೆದದ್ದನ್ನು ನೋಡಿ ಕರ್ತನ ಬೋಧನೆಗೆ ಅತ್ಯಾಶ್ಚರ್ಯಪಟ್ಟು ನಂಬಿದನು.

13ತರುವಾಯ ಪೌಲನೂ ಅವನ ಜೊತೆ ಯಲ್ಲಿದ್ದವರೂ ಪಾಫೋಸನ್ನು ಬಿಟ್ಟು ಪಂಪುಲ್ಯದಲ್ಲಿದ್ದ ಪೆರ್ಗೆಗೆ ಬಂದರು; ಯೋಹಾನನು ಅವರನ್ನು ಬಿಟ್ಟು ಹಿಂತಿರುಗಿ ಯೆರೂಸಲೇಮಿಗೆ ಹೋದನು;

14ಆಮೇಲೆ ಅವರು ಪೆರ್ಗೆಯಿಂದ ಹೊರಟು ಪಿಸಿದ್ಯ ಸೀಮೆಗೆ ಸೇರಿದ ಅಂತಿಯೋಕ್ಯಕ್ಕೆ ಬಂದರು. ಸಬ್ಬತ್‌ದಿನದಲ್ಲಿ ಅವರು ಸಭಾಮಂದಿರಕ್ಕೆ ಹೋಗಿ ಕೂತುಕೊಂಡರು.

15ನ್ಯಾಯಪ್ರಮಾಣ ಮತ್ತು ಪ್ರವಾದಿಗಳಗ್ರಂಥವು ಪಾರಾಯಣವಾದ ಮೇಲೆ ಸಭಾಮಂದಿರದ ಅಧಿಕಾರಿ ಗಳು--ಜನರೇ, ಸಹೋದರರೇ, ಜನರಿಗೆ ಹೇಳತಕ್ಕ ಬುದ್ಧಿಮಾತೇನಾದರೂ ನಿಮಗಿದ್ದರೆ ಹೇಳಿರಿ ಎಂದು ಅವರಿಗೆ ಹೇಳಿ ಕಳುಹಿಸಿದರು.

ಅಪೊಸ್ತಲರ ಕೃತ್ಯಗಳು 13 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी