ಅರಣ್ಯಕಾಂಡ 14:17

ಈಗ ನೀನು ಹೇಳಿದ ಪ್ರಕಾರ ನನ್ನ ಕರ್ತನ ಶಕ್ತಿಯು ದೊಡ್ಡದಾಗಿರಲಿ ಎಂದು ನಾನು ಬೇಡುತ್ತೇನೆ.

ಸಂದರ್ಭದೊಂದಿಗೆ ಓದಿ · ಅರಣ್ಯಕಾಂಡ 14

15ಈಗ ನೀನು ಈ ಜನರನ್ನು ಒಬ್ಬ ಮನುಷ್ಯನೋ ಎಂಬಂತೆ ಕೊಂದುಹಾಕಿದರೆ ನಿನ್ನ ಸುದ್ದಿಯನ್ನು ಕೇಳಿದ ಜನಾಂಗಗಳು--

16ಕರ್ತನು ಈ ಜನರನ್ನು ಅವರಿಗೆ ಪ್ರಮಾಣಮಾಡಿದ ದೇಶಕ್ಕೆ ತರಲು ಶಕ್ತಿಸಾಲದ ಕಾರಣ ಅವರನ್ನು ಅರಣ್ಯದಲ್ಲಿ ಕೊಂದು ಹಾಕಿದನು ಎಂದು ಹೇಳುವರು.

17ಈಗ ನೀನು ಹೇಳಿದ ಪ್ರಕಾರ ನನ್ನ ಕರ್ತನ ಶಕ್ತಿಯು ದೊಡ್ಡದಾಗಿರಲಿ ಎಂದು ನಾನು ಬೇಡುತ್ತೇನೆ.

18ಕರ್ತನು ದೀರ್ಘಶಾಂತನೂ ಮಹಾಕೃಪೆಯುಳ್ಳವನೂ ಅಕ್ರಮವನ್ನೂ ದ್ರೋಹವನ್ನೂ ಮನ್ನಿಸುವಾತನೂ ಅಪರಾಧಿಯನ್ನು ನಿರಪರಾಧಿಯೆಂದು ಎಣಿಸದವನೂ ಮೂರನೇ ನಾಲ್ಕನೇ ತಲೆಗಳ ವರೆಗೂ ಪಿತೃಗಳ ಅಕ್ರಮವನ್ನು ಮಕ್ಕಳಲ್ಲಿ ವಿಚಾರಿಸುವಾತನೂ ಎಂದು ನೀನು ಹೇಳಿದ್ದೀಯಲ್ಲಾ?

19ನಿನ್ನ ಕೃಪೆಯು ದೊಡ್ಡದಾಗಿರುವ ಪ್ರಕಾರವೂ ನೀನು ಐಗುಪ್ತದಿಂದ ಇಲ್ಲಿಯ ವರೆಗೆ ಮನ್ನಿಸಿದ ಪ್ರಕಾರವೂ ಈ ಜನರ ಅಕ್ರಮವನ್ನು ದಯ ದಿಂದ ಮನ್ನಿಸು ಎಂದು ಬೇಡಿಕೊಂಡನು.

ಅರಣ್ಯಕಾಂಡ 14 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी