ಯೆಹೆಜ್ಕೇಲನು 20:18

ಆದರೆ ನಾನು ಅರಣ್ಯದಲ್ಲಿ ಅವರ ಮಕ್ಕಳಿಗೆ ಹೇಳಿದ್ದೇನಂದರೆ--ನಿಮ್ಮ ತಂದೆಗಳ ನಿಯಮಗಳಲ್ಲಿ ನಡೆಯಬೇಡಿರಿ, ಅವರ ನ್ಯಾಯಗಳನ್ನು ಅನುಸರಿಸ ಬೇಡಿರಿ, ಅವರ ವಿಗ್ರಹಗಳಿಂದ ನಿಮ್ಮನ್ನು ಅಪವಿತ್ರ ಮಾಡಿಕೊಳ್ಳಬೇಡಿರಿ;

ಸಂದರ್ಭದೊಂದಿಗೆ ಓದಿ · ಯೆಹೆಜ್ಕೇಲನು 20

16ಅವರ ಹೃದಯವು ತಮ್ಮ ವಿಗ್ರಹಗಳಲ್ಲಿ ಆಸಕ್ತವಾಗಿ ನನ್ನ ನಿಯಮಗಳನ್ನು ಅನುಸರಿಸದೆ ನಿರಾಕರಿಸಿ ನಾನು ನೇಮಿಸಿದ ಸಬ್ಬತ್‌ ದಿನಗಳನ್ನು ಅಪವಿತ್ರ ಮಾಡಿದರು.

17ಆದರೂ ಅವರನ್ನು ನಾನು ನಾಶಮಾಡದ ಹಾಗೆ ನನ್ನ ಕಣ್ಣು ಕನಿಕರಿಸಿತು; ನಾನು ಅವರನ್ನು ಅರಣ್ಯದಲ್ಲಿ ಸಂಪೂರ್ಣವಾಗಿ ಮುಗಿಸಿಬಿಡ ಲಿಲ್ಲ.

18ಆದರೆ ನಾನು ಅರಣ್ಯದಲ್ಲಿ ಅವರ ಮಕ್ಕಳಿಗೆ ಹೇಳಿದ್ದೇನಂದರೆ--ನಿಮ್ಮ ತಂದೆಗಳ ನಿಯಮಗಳಲ್ಲಿ ನಡೆಯಬೇಡಿರಿ, ಅವರ ನ್ಯಾಯಗಳನ್ನು ಅನುಸರಿಸ ಬೇಡಿರಿ, ಅವರ ವಿಗ್ರಹಗಳಿಂದ ನಿಮ್ಮನ್ನು ಅಪವಿತ್ರ ಮಾಡಿಕೊಳ್ಳಬೇಡಿರಿ;

19ನಾನೇ ಕರ್ತನೂ ನಿಮ್ಮ ದೇವರೂ ಆಗಿದ್ದೇನೆ ನನ್ನ ನಿಯಮಗಳಲ್ಲಿಯೇ ನಡೆ ಯಿರಿ ನ್ಯಾಯಗಳನ್ನು ಕೈಕೊಂಡು ಅವುಗಳನ್ನೇ ಮಾಡಿರಿ;

20ನನ್ನ ಸಬ್ಬತ್ತುಗಳನ್ನು ಪರಿಶುದ್ಧಮಾಡಿರಿ ನಾನೇ ನಿಮ್ಮ ದೇವರಾದ ಕರ್ತನು ಎಂದು ಅವು ನಿಮಗೂ ನನಗೂ ನೀವು ತಿಳಿಯುವ ಹಾಗೆ ಗುರುತುಗಳಾಗಿರುವವು.

ಯೆಹೆಜ್ಕೇಲನು 20 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी