ಯೆಹೆಜ್ಕೇಲನು 46:17

ಆದರೆ ಆತನು ತನ್ನ ಸ್ವಾಸ್ತ್ಯದೊಳ ಗಿಂದ ತನ್ನ ಸೇವಕರಲ್ಲಿ ಒಬ್ಬರಿಗೆ ದಾನವಾಗಿ ಕೊಟ್ಟರೆ, ಅದು ಬಿಡುಗಡೆ ವರುಷದ ವರೆಗೂ ಅವನಿಗಾಗಿ ರುವದು; ಆ ಮೇಲೆ ಮತ್ತೆ ಪ್ರಧಾನನಿಗೆ ಸೇರಬೇಕು. ಅವನ ಸ್ವಾಸ್ಥ್ಯವು ಅವನ ಕುಮಾರರಿಗೆ ಮಾತ್ರ ಸಲ್ಲಬೇಕು.

ಸಂದರ್ಭದೊಂದಿಗೆ ಓದಿ · ಯೆಹೆಜ್ಕೇಲನು 46

15ಹೀಗೆ ಅವರು ಕುರಿಮರಿಯನ್ನು ಆಹಾರದ ಅರ್ಪಣೆಯನ್ನು ಎಣ್ಣೆಯನ್ನು ಪ್ರತಿದಿನದ ಮುಂಜಾನೆಯಲ್ಲಿ ಎಡೆಬಿಡದೆ ದಹನಬಲಿಯನ್ನಾಗಿ ಸಿದ್ಧಮಾಡಬೇಕು.

16ದೇವರಾದ ಕರ್ತನು ಹೀಗೆ ಹೇಳುತ್ತಾನೆ--ಪ್ರಧಾನನು ತನ್ನ ಕುಮಾರರಲ್ಲಿ ಯಾವನಿಗಾದರೂ ದಾನವನ್ನು ಕೊಟ್ಟರೆ ಅದರ ಬಾಧ್ಯತೆಯು ಅವನ ಕುಮಾರರಿಗೆ ಸಲ್ಲಬೇಕು. ಅದು ಬಾಧ್ಯವಾಗಿ ಅವರ ಸ್ವಾಸ್ತ್ಯವಾಗಿದೆ.

17ಆದರೆ ಆತನು ತನ್ನ ಸ್ವಾಸ್ತ್ಯದೊಳ ಗಿಂದ ತನ್ನ ಸೇವಕರಲ್ಲಿ ಒಬ್ಬರಿಗೆ ದಾನವಾಗಿ ಕೊಟ್ಟರೆ, ಅದು ಬಿಡುಗಡೆ ವರುಷದ ವರೆಗೂ ಅವನಿಗಾಗಿ ರುವದು; ಆ ಮೇಲೆ ಮತ್ತೆ ಪ್ರಧಾನನಿಗೆ ಸೇರಬೇಕು. ಅವನ ಸ್ವಾಸ್ಥ್ಯವು ಅವನ ಕುಮಾರರಿಗೆ ಮಾತ್ರ ಸಲ್ಲಬೇಕು.

18ಇದಾದ ಮೇಲೆ ಪ್ರಧಾನನು ಜನರ ಸ್ವಾಸ್ತ್ಯವನ್ನು ಬಲವಂತವಾಗಿ ತೆಗೆದುಕೊಂಡು ಬಾಧ್ಯತೆ ಯೊಳಗಿಂದ ಅವರನ್ನು ತಳ್ಳಬಾರದು ನನ್ನ ಜನರು ತಮ್ಮ ತಮ್ಮ ಬಾಧ್ಯತೆಯೊಳಗಿಂದ ಚದರಿಸಲ್ಪಡದ ಹಾಗೆ ಅವನು ತನ್ನ ಸ್ವಂತ ಬಾಧ್ಯತೆಯಿಂದಲೇ ತನ್ನ ಕುಮಾರರಿಗೆ ಸ್ವಾಸ್ತ್ಯವನ್ನು ಕೊಡಬೇಕು.

19ಆಮೇಲೆ ಅವನು ನನ್ನನ್ನು ಬಾಗಲಿನ ಪಕ್ಕದಲ್ಲಿ ಪ್ರವೇಶವಿದ್ದ ಉತ್ತರಕ್ಕೆ ಅಭಿಮುಖವಾದ ಯಾಜಕರ ಪರಿಶುದ್ಧ ಕೊಠಡಿಗೆ ಕರೆದುಕೊಂಡು ಹೋದನು. ಅಲ್ಲಿ ಇಗೋ, ಎರಡು ಕಡೆಗಳಲ್ಲಿ ಪಶ್ಚಿಮದ ಕಡೆಗೆ ಒಂದು ಸ್ಥಳವಿತ್ತು.

ಯೆಹೆಜ್ಕೇಲನು 46 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी