ಯೆರೆಮಿಯ 18:9

ಇದಲ್ಲದೆ ಯಾವ ಕ್ಷಣದಲ್ಲಿ ನಾನು ಒಂದು ಜನಾಂಗದ ವಿಷಯವಾಗಿಯೂ ಒಂದು ರಾಜ್ಯದ ವಿಷಯವಾಗಿಯೂ ಅದನ್ನು ಕಟ್ಟುವದಕ್ಕೂ ನೆಡುವದಕ್ಕೂ ಮಾತನಾಡುತ್ತೇನೋ

ಸಂದರ್ಭದೊಂದಿಗೆ ಓದಿ · ಯೆರೆಮಿಯ 18

7ಯಾವ ಕ್ಷಣದಲ್ಲಿ ನಾನು ಒಂದು ಜನಾಂಗದ ವಿಷಯವಾಗಿ ಮತ್ತು ಒಂದು ರಾಜ್ಯದ ವಿಷಯವಾಗಿ ಅದನ್ನು ಕೀಳುವದಕ್ಕೂ ಕೆಡವುವ ದಕ್ಕೂ ನಾಶಮಾಡುವದಕ್ಕೂ ಮಾತಾಡುತ್ತೇನೋ

8ಆ ಜನಾಂಗಕ್ಕೆ ವಿರೋಧವಾಗಿ ನಾನು ಮಾತನಾಡಿದ ತನ್ನ ಕೆಟ್ಟತನವನ್ನು ಬಿಟ್ಟು ತಿರುಗಿದರೆ ನಾನು ಅದಕ್ಕೆ ಮಾಡಬೇಕೆಂದು ಯೋಚಿಸಿದ ಕೆಟ್ಟದ್ದನ್ನು ಕುರಿತು ಪಶ್ಚಾ ತ್ತಾಪ ಪಡುವೆನು.

9ಇದಲ್ಲದೆ ಯಾವ ಕ್ಷಣದಲ್ಲಿ ನಾನು ಒಂದು ಜನಾಂಗದ ವಿಷಯವಾಗಿಯೂ ಒಂದು ರಾಜ್ಯದ ವಿಷಯವಾಗಿಯೂ ಅದನ್ನು ಕಟ್ಟುವದಕ್ಕೂ ನೆಡುವದಕ್ಕೂ ಮಾತನಾಡುತ್ತೇನೋ

10ಅದು ನನ್ನ ಸ್ವರಕ್ಕೆ ವಿಧೇಯವಾಗದೆ ನನ್ನ ದೃಷ್ಟಿಯಲ್ಲಿ ಕೆಟ್ಟದ್ದನ್ನು ಮಾಡಿದರೆ ನಾನು ಅದಕ್ಕೆ ಮೇಲನ್ನು ಮಾಡುತ್ತೇನೆಂದು ಹೇಳಿದ ಒಳ್ಳೇದನ್ನು ಕುರಿತು ಪಶ್ಚಾತ್ತಾಪಪಡುವೆನು.

11ಹೀಗಿರುವದರಿಂದ ಈಗ ಯೆಹೂದದ ಮನುಷ್ಯ ರಿಗೂ ಯೆರೂಸಲೇಮಿನ ನಿವಾಸಿಗಳಿಗೂ ನೀನು ಹೇಳಬೇಕಾದದ್ದೇನಂದರೆ, ಕರ್ತನು ಹೀಗೆ ಹೇಳುತ್ತಾನೆ --ಇಗೋ, ನಾನು ನಿಮಗೆ ವಿರೋಧವಾಗಿ ಕೆಟ್ಟದ್ದನ್ನು ಕಲ್ಪಿಸುತ್ತಾ ಇದ್ದೇನೆ; ನಿಮಗೆ ವಿರೋಧವಾಗಿ ಉಪಾಯವನ್ನು ಆಲೋಚಿಸುತ್ತಾ ಇದ್ದೇನೆ; ನಿಮ್ಮ ನಿಮ್ಮ ಕೆಟ್ಟ ಮಾರ್ಗಗಳನ್ನು ಬಿಟ್ಟು ಹಿಂತಿರುಗಿರಿ, ನಿಮ್ಮ ಮಾರ್ಗಗಳನ್ನೂ ಕ್ರಿಯೆಗಳನ್ನೂ ಒಳ್ಳೇದಾಗ ಮಾಡಿರಿ ಎಂಬದು.

ಯೆರೆಮಿಯ 18 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी