ಯೆಶಾಯ 49:17

ನಿನ್ನ ಮಕ್ಕಳು ತ್ವರೆಪಡುವರು; ನಿನ್ನನ್ನು ಕೆಡವಿ ಹಾಳುಮಾಡಿದವರು ನಿನ್ನೊಳಗಿಂದ ಹೊರಟುಹೋಗುವರು.

ಸಂದರ್ಭದೊಂದಿಗೆ ಓದಿ · ಯೆಶಾಯ 49

15ತನ್ನ ಗರ್ಭದ ಮಗನ ಮೇಲೆ ಕರುಣಿಸದೆ ಒಬ್ಬ ಹೆಂಗಸು ತನ್ನ ಮೊಲೇ ಕೂಸನ್ನು ಮರೆತಾಳೇ? ಹೌದು, ಅವಳು ಮರೆಯಬಹುದು, ಆದರೂ ನಾನು ನಿನ್ನನ್ನು ಮರೆ ಯುವದಿಲ್ಲ.

16ಇಗೋ, ನಾನು ನನ್ನ ಅಂಗೈಗಳಲ್ಲಿ ನಿನ್ನನ್ನು ಕೆತ್ತಿಕೊಂಡಿದ್ದೇನೆ; ನಿನ್ನ ಗೋಡೆಗಳು ಸದಾ ನನ್ನ ಕಣ್ಣೆದುರಿನಲ್ಲಿವೆ.

17ನಿನ್ನ ಮಕ್ಕಳು ತ್ವರೆಪಡುವರು; ನಿನ್ನನ್ನು ಕೆಡವಿ ಹಾಳುಮಾಡಿದವರು ನಿನ್ನೊಳಗಿಂದ ಹೊರಟುಹೋಗುವರು.

18ನಿನ್ನ ಕಣ್ಣುಗಳನ್ನು ಎತ್ತಿ ಸುತ್ತಲೂ ನೋಡು. ಇಗೋ, ಇವರೆಲ್ಲರೂ ಕೂಡಿ ಕೊಂಡು ನಿನ್ನ ಬಳಿಗೆ ಬರುತ್ತಿದ್ದಾರೆ. ಕರ್ತನು ಹೇಳುವದೇನಂದರೆ--ನನ್ನ ಜೀವದಾಣೆ, ನಿಶ್ಚಯವಾಗಿ ನೀನು ಅವರನ್ನೆಲ್ಲಾ ಆಭರಣಗಳಂತೆ ಧರಿಸಿಕೊಳ್ಳುವಿ ಮತ್ತು ನೀನು ಅವರನ್ನು ಮದಲಗಿತ್ತಿಯಂತೆ ಕಟ್ಟಿ ಕೊಳ್ಳುವಿ.

19ನಿನ್ನ ಹಾಳಾದ ಸ್ಥಳಗಳೂ ನಿನ್ನ ಏಕಾಂತ ಸ್ಥಳಗಳೂ ಕೆಡವಲ್ಪಟ್ಟ ನಿನ್ನ ದೇಶವೂ ಈಗ ನಿವಾಸಿ ಗಳಿಗೆ ಇಕ್ಕಟ್ಟಾಗುವವು; ನಿನ್ನನ್ನು ನುಂಗಿದವರು ದೂರ ವಾಗುವರು.

ಯೆಶಾಯ 49 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी