೧ ಸಮುವೇಲನು 12:8

ಯಾಕೋಬನು ಐಗುಪ್ತಕ್ಕೆ ಬಂದ ತರುವಾಯ ನಿಮ್ಮ ತಂದೆಗಳು ಕರ್ತ ನಿಗೆ ಮೊರೆಯಿಟ್ಟರು. ಆಗ ಕರ್ತನು ಮೋಶೆಯನ್ನೂ ಆರೋನನನ್ನೂ ಕಳುಹಿಸಿದನು. ಇವರು ನಿಮ್ಮ ತಂದೆ ಗಳನ್ನು ಐಗುಪ್ತದಿಂದ ಕರತಂದು ಅವರನ್ನು ಈ ದೇಶ ದಲ್ಲಿ ವಾಸಿಸುವಂತೆ ಮಾಡಿದನು.

ಸಂದರ್ಭದೊಂದಿಗೆ ಓದಿ · ೧ ಸಮುವೇಲನು 12

6ಆಗ ಸಮುವೇಲನು ಜನರಿಗೆ--ಮೋಶೆ ಯನ್ನೂ ಆರೋನನನ್ನೂ ಮುಂದಕ್ಕೆ ತಂದು ನಿಮ್ಮ ಪಿತೃಗಳನ್ನು ಐಗುಪ್ತದೇಶದೊಳಗಿಂದ ಬರಮಾಡಿದ ಕರ್ತನೇ ಇದಕ್ಕೆ ಸಾಕ್ಷಿ.

7ಆದದರಿಂದ ಈಗ ನಿಲ್ಲಿರಿ; ಕರ್ತನು ನಿಮಗೂ ನಿಮ್ಮ ತಂದೆಗಳಿಗೂ ಮಾಡಿದ ಸಮಸ್ತ ನೀತಿಯುಳ್ಳ ಕ್ರಿಯೆಗಳ ವಿಷಯ ಕರ್ತನ ಮುಂದೆ ನಿಮಗೆ ನ್ಯಾಯ ಹೇಳುತ್ತೇನೆ.

8ಯಾಕೋಬನು ಐಗುಪ್ತಕ್ಕೆ ಬಂದ ತರುವಾಯ ನಿಮ್ಮ ತಂದೆಗಳು ಕರ್ತ ನಿಗೆ ಮೊರೆಯಿಟ್ಟರು. ಆಗ ಕರ್ತನು ಮೋಶೆಯನ್ನೂ ಆರೋನನನ್ನೂ ಕಳುಹಿಸಿದನು. ಇವರು ನಿಮ್ಮ ತಂದೆ ಗಳನ್ನು ಐಗುಪ್ತದಿಂದ ಕರತಂದು ಅವರನ್ನು ಈ ದೇಶ ದಲ್ಲಿ ವಾಸಿಸುವಂತೆ ಮಾಡಿದನು.

9ಆದರೆ ಅವರು ತಮ್ಮ ದೇವರಾದ ಕರ್ತನನ್ನು ಮರೆತುಹೋದಾಗ ಆತನು ಅವರನ್ನು ಹಾಚೋರಿನ ಸೈನ್ಯಾಧಿಪತಿಯಾದ ಸೀಸೆರನ ಕೈಗೂ ಫಿಲಿಷ್ಟಿಯರ ಕೈಗೂ ಮೋವಾಬ್ಯರ ಅರಸನ ಕೈಗೂ ಮಾರಿಬಿಟ್ಟನು.

10ಇವರು ಅವರ ಸಂಗಡ ಯುದ್ಧಮಾಡಿದರು. ಆದದರಿಂದ ಅವರು ಕರ್ತನಿಗೆ ಮೊರೆಯಿಟ್ಟು--ನಾವು ಕರ್ತನಾದ ನಿನ್ನನ್ನು ಬಿಟ್ಟು ಬಾಳನನ್ನೂ ಅಷ್ಟೋರೆತನ್ನೂ ಸೇವಿಸಿದ್ದರಿಂದ ಪಾಪಮಾಡಿದೆವು. ಈಗ ನೀನು ನಮ್ಮ ಶತ್ರುಗಳ ಕೈಯಿಂದ ನಮ್ಮನ್ನು ಬಿಡಿಸು, ನಾವು ನಿನ್ನನ್ನು ಸೇವಿಸು ವೆವು ಅಂದರು.

೧ ಸಮುವೇಲನು 12 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी