ವಿಮೋಚನಕಾಂಡ 33:16

ನನಗೂ ನಿನ್ನ ಜನರಿಗೂ ನಿನ್ನ ದೃಷ್ಟಿಯಲ್ಲಿ ಕೃಪೆ ದೊರಕಿತೆಂದು ಯಾವದರಿಂದ ತಿಳಿದು ಬರುವದು? ನೀನು ನಮ್ಮೊಂದಿಗೆ ಹೋಗುವ ದರಿಂದ ಅಲ್ಲವೋ? ಹೀಗೆ ನಾನೂ ನಿನ್ನ ಜನರೂ ಭೂಮಿಯ ಮೇಲಿರುವ ಎಲ್ಲಾ ಜನರಿಂದ ಪ್ರತ್ಯೇಕ ವಾಗುವೆವು ಅಂದನು.

ಸಂದರ್ಭದೊಂದಿಗೆ ಓದಿ · ವಿಮೋಚನಕಾಂಡ 33

14ಆಗ ಆತನು--ನನ್ನ ಸನ್ನಿಧಾನವು ನಿನ್ನ ಸಂಗಡ ಹೋಗುವದು; ನಾನು ನಿನಗೆ ವಿಶ್ರಾಂತಿಯನ್ನು ಕೊಡುವೆನು ಅಂದನು.

15ಮೋಶೆಯು ಆತನಿಗೆ--ನಿನ್ನ ಸನ್ನಿಧಾನವು ನನ್ನೊಂದಿಗೆ ಹೋಗದಿದ್ದರೆ ನಮ್ಮನ್ನು ಇಲ್ಲಿಂದ ಕರ ಕೊಂಡು ಹೋಗಬೇಡ.

16ನನಗೂ ನಿನ್ನ ಜನರಿಗೂ ನಿನ್ನ ದೃಷ್ಟಿಯಲ್ಲಿ ಕೃಪೆ ದೊರಕಿತೆಂದು ಯಾವದರಿಂದ ತಿಳಿದು ಬರುವದು? ನೀನು ನಮ್ಮೊಂದಿಗೆ ಹೋಗುವ ದರಿಂದ ಅಲ್ಲವೋ? ಹೀಗೆ ನಾನೂ ನಿನ್ನ ಜನರೂ ಭೂಮಿಯ ಮೇಲಿರುವ ಎಲ್ಲಾ ಜನರಿಂದ ಪ್ರತ್ಯೇಕ ವಾಗುವೆವು ಅಂದನು.

17ಅದಕ್ಕೆ ಕರ್ತನು ಮೋಶೆಗೆ--ನೀನು ಆಡಿದ ಈ ಮಾತಿನಂತೆಯೇ ನಾನು ಇದನ್ನು ಮಾಡುತ್ತೇನೆ. ನನ್ನ ದೃಷ್ಟಿಯಲ್ಲಿ ನಿನಗೆ ಕೃಪೆ ದೊರಕಿತು. ನಾನು ನಿನ್ನನ್ನು ಹೆಸರಿನಿಂದ ತಿಳಿದಿದ್ದೇನೆ ಅಂದನು.

18ಅವನು--ನಿನ್ನ ಮಹಿಮೆಯನ್ನು ನನಗೆ ತೋರಿಸು ಎಂದು ನಾನು ನಿನ್ನನ್ನು ಬೇಡುತ್ತೇನೆ ಅಂದನು.

ವಿಮೋಚನಕಾಂಡ 33 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी