ಯೆಹೋಶುವ 2:16

ನಿಮ್ಮನ್ನು ಹಿಂದಟ್ಟುವವರು ನಿಮಗೆ ಅಡ್ಡಬಾರದ ಹಾಗೆ ನೀವು ಬೆಟ್ಟಕ್ಕೆ ಹೋಗಿ ಅವರು ತಿರಿಗಿ ಬರುವ ವರೆಗೂ ಅಲ್ಲಿ ಮೂರು ದಿವಸ ಅಡಗಿ ಕೊಂಡಿದ್ದು ತರುವಾಯ ನಿಮ್ಮ ಮಾರ್ಗವಾಗಿ ಹೋಗಿರಿ ಅಂದಳು.

ಸಂದರ್ಭದೊಂದಿಗೆ ಓದಿ · ಯೆಹೋಶುವ 2

14ಆ ಮನುಷ್ಯರು ಆಕೆಗೆ--ನೀನು ಈ ನಮ್ಮ ಕಾರ್ಯವನ್ನು ಬಹಿರಂಗಮಾಡದೆ ಇದ್ದರೆ ನಮ್ಮ ಪ್ರಾಣವು ನಿಮಗೋಸ್ಕರ ಇರುವದು. ಕರ್ತನು ನಮಗೆ ಈ ದೇಶವನ್ನು ಕೊಟ್ಟಾಗ ಸತ್ಯದಿಂದಲೂ ದಯ ದಿಂದಲೂ ನಡೆದುಕೊಳ್ಳುವೆವು ಅಂದರು.

15ಆಗ ಅವರನ್ನು ಹಗ್ಗದಿಂದ ಕಿಟಿಕಿಯ ಮೂಲಕ ಇಳಿಸಿ ಬಿಟ್ಟಳು. ಯಾಕಂದರೆ ಆಕೆಯ ಮನೆಯು ಪಟ್ಟಣದ ಗೋಡೆಯ ಮೇಲೆ ಇತ್ತು. ಗೋಡೆಯ ಮೇಲೆ ಆಕೆಯು ವಾಸವಾಗಿದ್ದಳು.

16ನಿಮ್ಮನ್ನು ಹಿಂದಟ್ಟುವವರು ನಿಮಗೆ ಅಡ್ಡಬಾರದ ಹಾಗೆ ನೀವು ಬೆಟ್ಟಕ್ಕೆ ಹೋಗಿ ಅವರು ತಿರಿಗಿ ಬರುವ ವರೆಗೂ ಅಲ್ಲಿ ಮೂರು ದಿವಸ ಅಡಗಿ ಕೊಂಡಿದ್ದು ತರುವಾಯ ನಿಮ್ಮ ಮಾರ್ಗವಾಗಿ ಹೋಗಿರಿ ಅಂದಳು.

17ಆಗ ಆ ಮನುಷ್ಯರು ಆಕೆಗೆನೀನು ನಮಗೆ ಇಟ್ಟ ನಿನ್ನ ಆಣೆಯ ನಿಮಿತ್ತ ನಾವು ನಿರಪರಾಧಿಗಳಾಗಿರಬೇಕು.

18ಇಗೋ, ನಾವು ದೇಶ ದಲ್ಲಿ ಪ್ರವೇಶಿಸುವಾಗ ನೀನು ನಮ್ಮನ್ನು ಕಿಟಿಕಿಯಿಂದ ಇಳಿಯಬಿಟ್ಟ ಈ ಕೆಂಪು ನೂಲಿನ ದಾರವನ್ನು ಕಟ್ಟಿ ನಿನ್ನ ತಂದೆತಾಯಿಯನ್ನೂ ಸಹೋದರರನ್ನೂ ನಿನ್ನ ತಂದೆಯ ಮನೆಯವರೆಲ್ಲರನ್ನೂ ನಿನ್ನ ಮನೆಯಲ್ಲಿ ಕೂಡಿಸಿಕೊಳ್ಳಬೇಕು.

ಯೆಹೋಶುವ 2 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी