ಇದಲ್ಲದೆ ನಿನ್ನ ವಸ್ತ್ರಗಳನ್ನು ತೆಗೆದುಹಾಕಿ, ನಿನ್ನ ಸೌಂದರ್ಯದ ಒಡವೆಗಳನ್ನು ಕಸಿದುಕೊಳ್ಳುವರು;
24ಅವರೆಲ್ಲರೂ ರಥಗಳ ಸಂಗಡಲೂ ಬಂಡಿ ಗಳ ಸಂಗಡಲೂ ಜನಗಳ ಸಮೂಹದ ಸಂಗಡಲೂ ಬಲವುಳ್ಳವರಾಗಿ ನಿನಗೆ ವಿರುದ್ಧವಾಗಿ ಬರುವರು. ಸುತ್ತಲೂ ಖೇಡ್ಯವನ್ನೂ ಗುರಾಣಿಯನ್ನೂ ಶಿರಸ್ತ್ರಾಣ ವನ್ನೂ ನಿನಗೆ ವಿರುದ್ಧವಾಗಿರಿಸುವೆನು. ಇದಲ್ಲದೆ ನಾನು ಅವರ ಮುಂದೆ ನ್ಯಾಯವನ್ನು ಇಡುವೆನು; ಅವರು ತಮ್ಮ ನ್ಯಾಯಗಳ ಪ್ರಕಾರ ನಿನಗೆ ನ್ಯಾಯತೀರಿಸುವರು.
25ಇದಲ್ಲದೆ ನನ್ನ ಅಸೂಯೆಯನ್ನು ನಿನಗೆ ವಿರುದ್ಧವಾಗಿ ಬರಮಾಡುವೆನು; ಅವರು ನಿನ್ನಲ್ಲಿ ಕೋಪತೀರಿಸಿ ಕೊಳ್ಳುವರು; ನಿನ್ನ ಮೂಗನ್ನೂ ಕಿವಿಗಳನ್ನೂ ತೆಗೆದು ಹಾಕುವರು; ನಿನ್ನಲ್ಲಿ ಉಳಿದವರು ಕತ್ತಿಯಿಂದ ಬೀಳು ವರು; ನಿನ್ನ ಗಂಡು ಹೆಣ್ಣು ಮಕ್ಕಳನ್ನು ಅಪಹರಿಸುವರು; ನಿನ್ನಲ್ಲಿ ಉಳಿದವರೆಲ್ಲರೂ ಅಗ್ನಿಗೆ ಆಹುತಿಯಾಗುವರು.
26ಇದಲ್ಲದೆ ನಿನ್ನ ವಸ್ತ್ರಗಳನ್ನು ತೆಗೆದುಹಾಕಿ, ನಿನ್ನ ಸೌಂದರ್ಯದ ಒಡವೆಗಳನ್ನು ಕಸಿದುಕೊಳ್ಳುವರು;
27ಹೀಗೆ ನಾನು ನಿನ್ನ ದುಷ್ಕರ್ಮವನ್ನು ನೀನು ಐಗುಪ್ತದಲ್ಲಿದ್ದಂದಿನಿಂದ ನಡೆಸಿದ ವ್ಯಭಿಚಾರವನ್ನು ನಿನ್ನಿಂದ ತೊಲಗಿಸುವೆನು; ಆಮೇಲೆ ನೀನು ಅವರ ಕಡೆಗೆ ಕಣ್ಣೆತ್ತದೆ, ಐಗುಪ್ತವನ್ನು ಜ್ಞಾಪಕಕ್ಕೆ ತರದೇ ಇರುವಿ.
28ದೇವರಾದ ಕರ್ತನು ಹೀಗೆ ಹೇಳುತ್ತಾನೆ --ಇಗೋ, ನೀನು ಹಗೆಮಾಡುವವರ ಕೈಯಲ್ಲಿಯೂ ಯಾರ ಕಡೆಯಿಂದ ನಿನ್ನ ಮನಸ್ಸು ಅಗಲಿ ಹೋಯಿತೋ ಅವರ ಕೈಯಲ್ಲಿಯೂ ನಿನ್ನನ್ನು ಒಪ್ಪಿಸುತ್ತೇನೆ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ