ಓ ಕರ್ತನೇ, ಏಳು; ಓ ದೇವ ರೇ, ನಿನ್ನ ಕೈ ಎತ್ತು, ದೀನರನ್ನು ಮರೆತು ಬಿಡಬೇಡ.
10ಅವನು ಕುಗ್ಗಿ ಬೊಗ್ಗುತ್ತಾನೆ; ಆದದರಿಂದ ಗತಿಯಿಲ್ಲದವರು ಅವನ ಬಲದಿಂದ ಬೀಳುತ್ತಾರೆ.
11ದೇವರು ಮರೆತು ಬಿಟ್ಟಿ ದ್ದಾನೆ; ತನ್ನ ಮುಖವನ್ನು ಮರೆಮಾಡುತ್ತಾನೆ; ಆತನು ಎಂದೂ ನೋಡನು ಎಂದು ತನ್ನ ಹೃದಯದಲ್ಲಿ ಹೇಳಿಕೊಂಡಿದ್ದಾನೆ.
12ಓ ಕರ್ತನೇ, ಏಳು; ಓ ದೇವ ರೇ, ನಿನ್ನ ಕೈ ಎತ್ತು, ದೀನರನ್ನು ಮರೆತು ಬಿಡಬೇಡ.
13ದುಷ್ಟನು ದೇವರನ್ನು ಅಲಕ್ಷ್ಯಮಾಡುವದು ಯಾಕೆ? --ನೀನು ಅದನ್ನು ವಿಚಾರಿಸುವದಿಲ್ಲವೆಂದು ಅವನು ತನ್ನ ಹೃದಯದಲ್ಲಿ ಹೇಳಿಕೊಂಡಿದ್ದಾನೆ.
14ನೀನು ಅದನ್ನು ನೋಡಿದ್ದೀ; ನಿನ್ನ ಕೈಯಿಂದ ಪ್ರತಿಫಲಕೊಡು ವದಕ್ಕೆ ಅವನ ಕುಯುಕ್ತಿಯನ್ನೂ ಹಗೆತನವನ್ನೂ ದೃಷ್ಟಿ ಸುತ್ತೀ. ಗತಿಯಿಲ್ಲದವನು ನಿನಗೆ ತನ್ನನ್ನು ಒಪ್ಪಿಸುತ್ತಾನೆ; ದಿಕ್ಕಿಲ್ಲದವನಿಗೆ ಸಹಾಯಕನು ನೀನೇ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ