ಯೋವೇಲ 3:17

ಹೀಗೆ ನನ್ನ ಪರಿಶುದ್ಧ ಪರ್ವತವಾದ ಚೀಯೋನಿ ನಲ್ಲಿ ವಾಸಿಸುವ ನಿಮ್ಮ ದೇವರಾದ ಕರ್ತನು ನಾನೇ ಎಂದು ನೀವು ತಿಳುಕೊಳ್ಳುವಿರಿ; ಆಗ ಯೆರೂಸಲೇಮು ಪರಿಶುದ್ಧವಾಗಿರುವದು; ಅನ್ಯರು ಇನ್ನು ಅದರಲ್ಲಿ ಹಾದುಹೋಗರು.

ಸಂದರ್ಭದೊಂದಿಗೆ ಓದಿ · ಯೋವೇಲ 3

15ಸೂರ್ಯ, ಚಂದ್ರ ಕಪ್ಪಾಗುವವು; ನಕ್ಷತ್ರಗಳು ತಮ್ಮ ಪ್ರಕಾಶವನ್ನು ಮರೆಮಾಡುವವು.

16ಕರ್ತನು ಚೀಯೋನಿನೊಳಗಿಂದ ಘರ್ಜಿಸಿ ಯೆರೂಸಲೇಮಿನೊಳಗಿಂದ ತನ್ನ ಶಬ್ದವನ್ನು ಕೊಡುವನು. ಆಕಾಶಗಳೂ ಭೂಮಿಯೂ ಕದಲು ವವು; ಆದರೆ ಕರ್ತನು ತನ್ನ ಜನರಿಗೆ ನಿರೀಕ್ಷೆಯೂ ಇಸ್ರಾಯೇಲನ ಮಕ್ಕಳಿಗೆ ಬಲವೂ ಆಗಿರುವನು.

17ಹೀಗೆ ನನ್ನ ಪರಿಶುದ್ಧ ಪರ್ವತವಾದ ಚೀಯೋನಿ ನಲ್ಲಿ ವಾಸಿಸುವ ನಿಮ್ಮ ದೇವರಾದ ಕರ್ತನು ನಾನೇ ಎಂದು ನೀವು ತಿಳುಕೊಳ್ಳುವಿರಿ; ಆಗ ಯೆರೂಸಲೇಮು ಪರಿಶುದ್ಧವಾಗಿರುವದು; ಅನ್ಯರು ಇನ್ನು ಅದರಲ್ಲಿ ಹಾದುಹೋಗರು.

18ಆ ದಿನದಲ್ಲಿ ಆಗುವದೇನಂ ದರೆ, ಬೆಟ್ಟಗಳು ಹೊಸ ದ್ರಾಕ್ಷಾರಸವನ್ನು ಸುರಿಯುವವು; ಗುಡ್ಡಗಳು ಹಾಲಿನಿಂದ ಹರಿಯುವವು; ಯೆಹೂದದ ಹಳ್ಳಗಳೆಲ್ಲಾ ನೀರಿನಿಂದ ಹರಿಯುವವು; ಕರ್ತನ ಆಲಯದೊಳಗಿಂದ ಬುಗ್ಗೆ ಹೊರಟು, ಶಿಟ್ಟೀಮಿನ ತಗ್ಗಿಗೆ ಜಲ ಕೊಡುವದು.

19ಐಗುಪ್ತವು ಹಾಳಾಗು ವದು; ಎದೋಮು ಹಾಳಾದ ಅರಣ್ಯವಾಗುವದು; ಅವರು ಯೆಹೂದನ ಮಕ್ಕಳನ್ನು ಬಲಾತ್ಕಾರಮಾಡಿ ತಮ್ಮ ದೇಶದಲ್ಲಿ ಅಪರಾಧವಿಲ್ಲದ ರಕ್ತವನ್ನು ಚೆಲ್ಲಿ ದರು.

ಯೋವೇಲ 3 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी