ಅಪೊಸ್ತಲರ ಕೃತ್ಯಗಳು 22:8

ಅದಕ್ಕೆ ನಾನು ಪ್ರತ್ಯುತ್ತರವಾಗಿ--ಕರ್ತನೇ, ನೀನು ಯಾರು ಎಂದು ಕೇಳಿದಾಗ ಆತನು--ನೀನು ಹಿಂಸಿಸುತ್ತಿರುವ ನಜರೇತಿನ ಯೇಸುವೇ ನಾನು ಎಂದು ನನಗೆ ಹೇಳಿದನು.

ಸಂದರ್ಭದೊಂದಿಗೆ ಓದಿ · ಅಪೊಸ್ತಲರ ಕೃತ್ಯಗಳು 22

6ತರುವಾಯ ನಾನು ಪ್ರಯಾಣಮಾಡುತ್ತಾ ಸುಮಾರು ಮಧ್ಯಾಹ್ನದ ಸಮಯದಲ್ಲಿ ದಮಸ್ಕದ ಹತ್ತಿರ ಬಂದಾಗ ಫಕ್ಕನೆ ಆಕಾಶದಿಂದ ಒಂದು ದೊಡ್ಡ ಬೆಳಕು ನನ್ನ ಸುತ್ತಲೂ ಹೊಳೆಯಿತು.

7ಆಗ ನಾನು ನೆಲಕ್ಕೆ ಬಿದ್ದು--ಸೌಲನೇ, ಸೌಲನೇ, ನೀನು ನನ್ನನ್ನು ಯಾಕೆ ಹಿಂಸಿಸುತ್ತೀ? ಎಂದು ಹೇಳುವ ಧ್ವನಿಯನ್ನು ಕೇಳಿದೆನು.

8ಅದಕ್ಕೆ ನಾನು ಪ್ರತ್ಯುತ್ತರವಾಗಿ--ಕರ್ತನೇ, ನೀನು ಯಾರು ಎಂದು ಕೇಳಿದಾಗ ಆತನು--ನೀನು ಹಿಂಸಿಸುತ್ತಿರುವ ನಜರೇತಿನ ಯೇಸುವೇ ನಾನು ಎಂದು ನನಗೆ ಹೇಳಿದನು.

9ಆಗ ನನ್ನೊಂದಿಗಿದ್ದವರು ನಿಜವಾಗಿಯೂ ಆ ಬೆಳಕನ್ನು ನೋಡಿ ಭಯಪಟ್ಟರು; ಆದರೆ ನನ್ನೊಂದಿಗೆ ಮಾತನಾಡಿದ ಆತನ ಧ್ವನಿಯನ್ನು ಅವರು ಕೇಳಲಿಲ್ಲ.

10ನಾನು--ಕರ್ತನೇ, ನಾನೇನು ಮಾಡಬೇಕು ಎಂದು ಕೇಳಿದೆನು; ಅದಕ್ಕೆ ಕರ್ತನು ನನಗೆ--ನೀನೆದ್ದು ದಮಸ್ಕದೊಳಕ್ಕೆ ಹೋಗು; ನಿನಗೆ ನೇಮಿಸಲ್ಪ ಟ್ಟವುಗಳೆಲ್ಲವು ಅಲ್ಲಿ ನಿನಗೆ ತಿಳಿಸಲ್ಪಡುವವು ಎಂದು ಹೇಳಿದನು.

ಅಪೊಸ್ತಲರ ಕೃತ್ಯಗಳು 22 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी