ಯೆರೆಮಿಯ 50:18

ಆದದರಿಂದ ಇಸ್ರಾಯೇಲಿನ ದೇವರಾದ ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ಇಗೋ, ನಾನು ಅಶ್ಶೂರಿನ ಅರಸನನ್ನು ಶಿಕ್ಷಿಸಿದ ಹಾಗೆ, ಬಾಬೆಲಿನ ಅರಸನನ್ನೂ ಅವನ ದೇಶವನ್ನೂ ಶಿಕ್ಷಿಸುತ್ತೇನೆ.

ಸಂದರ್ಭದೊಂದಿಗೆ ಓದಿ · ಯೆರೆಮಿಯ 50

16ಬಿತ್ತುವವನನ್ನೂ ಸುಗ್ಗಿ ಕಾಲದಲ್ಲಿ ಕುಡುಗೋಲು ಹಿಡಿಯುವವನನ್ನೂ ಬಾಬೆಲಿನೊಳ ಗಿಂದ ಕಡಿದು ಬಿಡಿರಿ; ಕಷ್ಟಪಡಿಸುವ ಕತ್ತಿಯ ಭಯದಿಂದ ಅವರು ತಮ್ಮ ತಮ್ಮ ಜನರ ಬಳಿಗೆ ತಿರುಗಿಕೊಳ್ಳುವರು; ತಮ್ಮ ತಮ್ಮ ದೇಶಗಳಿಗೆ ಓಡಿ ಹೋಗುವರು.

17ಇಸ್ರಾಯೇಲನು ಚದರಿಹೋದ ಕುರಿಯಾಗಿ ದ್ದನು; ಸಿಂಹಗಳು ಅವನನ್ನು ಓಡಿಸಿಬಿಟ್ಟವು; ಮೊದಲು ಅಶ್ಶೂರಿನ ಅರಸನು ಅವನನ್ನು ನುಂಗಿಬಿಟ್ಟನು. ಕಡೆಯಲ್ಲಿ ಬಾಬೆಲಿನ ಅರಸನಾದ ಈ ನೆಬೂಕದ್ನೆಚ್ಚರನು ಅವನ ಎಲುಬುಗಳನ್ನು ಮುರಿದಿದ್ದಾನೆ.

18ಆದದರಿಂದ ಇಸ್ರಾಯೇಲಿನ ದೇವರಾದ ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ಇಗೋ, ನಾನು ಅಶ್ಶೂರಿನ ಅರಸನನ್ನು ಶಿಕ್ಷಿಸಿದ ಹಾಗೆ, ಬಾಬೆಲಿನ ಅರಸನನ್ನೂ ಅವನ ದೇಶವನ್ನೂ ಶಿಕ್ಷಿಸುತ್ತೇನೆ.

19ಇಸ್ರಾಯೇಲನನ್ನು ಅವನ ನಿವಾಸಕ್ಕೆ ತಿರಿಗಿ ಬರಮಾಡುತ್ತೇನೆ; ಅವನು ಕರ್ಮೆಲಿ ನಲ್ಲಿಯೂ ಬಾಷಾನಿನ್ನಲ್ಲಿಯೂ ಮೇಯುವನು; ಅವನ ಪ್ರಾಣವು ಎಫ್ರಾಯಿಮ್‌ ಬೆಟ್ಟದಲ್ಲಿಯೂ ಗಿಲ್ಯಾದಿ ನಲ್ಲಿಯೂ ತೃಪ್ತಿಹೊಂದುವದು.

20ಕರ್ತನು ಹೀಗೆ ಅನ್ನುತ್ತಾನೆ--ಆ ದಿವಸಗಳಲ್ಲಿ ಆ ಕಾಲದಲ್ಲಿ ಇಸ್ರಾ ಯೇಲಿನ ಅಕ್ರಮವನ್ನು ಹುಡುಕಿದರೂ ಅಲ್ಲಿ ಏನೂ ಇರದು; ಯೆಹೂದದ ಪಾಪಗಳನ್ನು ಹುಡುಕಿದರೂ ಅವು ಸಿಕ್ಕುವದಿಲ್ಲ. ನಾನು ಉಳಿಸುವವರನ್ನು ಮನ್ನಿಸುತ್ತೇನೆ.

ಯೆರೆಮಿಯ 50 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी