೨ ಪೇತ್ರನು 2:3

ಅವರು ದ್ರವ್ಯಾಶೆಯುಳ್ಳವರಾಗಿ ಕಲ್ಪನೆಯ ಮಾತು ಗಳನ್ನು ಹೇಳುತ್ತಾ ನಿಮ್ಮಿಂದ ಲಾಭವನ್ನು ಸಂಪಾದಿಸ ಬೇಕೆಂದಿರುವರು. ಅಂಥವರಿಗೆ ಬಹಳ ಕಾಲದಿಂದಿದ್ದ ತೀರ್ಪು ತಡವಾಗುವದಿಲ್ಲ. ಅವರಿಗಾಗುವ ನಾಶನವು ತೂಕಡಿಸುವದಿಲ್ಲ.

ಸಂದರ್ಭದೊಂದಿಗೆ ಓದಿ · ೨ ಪೇತ್ರನು 2

1ಆದರೆ ಜನರಲ್ಲಿ ಸುಳ್ಳು ಪ್ರವಾದಿಗಳು ಸಹ ಇದ್ದರು; ಅದೇ ಪ್ರಕಾರ ನಿಮ್ಮಲ್ಲಿಯೂ ಸುಳ್ಳು ಬೋಧಕರು ಇರುವರು. ಅವರು ಪಾಷಾಂಡ ಬೋಧನೆಗಳನ್ನು ರಹಸ್ಯವಾಗಿ ಒಳತರುವವರೂ ತಮ್ಮನ್ನು ಕೊಂಡುಕೊಂಡ ಕರ್ತನನ್ನು ಕೂಡ ತಾವು ಅಲ್ಲಗಳೆಯುವವರೂ ಆಗಿದ್ದು ಫಕ್ಕನೆ ತಮ್ಮ

2ಅವರ ಕೆಡುಕಿನ ಮಾರ್ಗಗಳನ್ನು ಅನೇಕರು ಅನುಸರಿಸುವರು; ಅವರ ನಿಮಿತ್ತ ಸತ್ಯ ಮಾರ್ಗಕ್ಕೆ ದೂಷಣೆ ಉಂಟಾಗುವದು.

3ಅವರು ದ್ರವ್ಯಾಶೆಯುಳ್ಳವರಾಗಿ ಕಲ್ಪನೆಯ ಮಾತು ಗಳನ್ನು ಹೇಳುತ್ತಾ ನಿಮ್ಮಿಂದ ಲಾಭವನ್ನು ಸಂಪಾದಿಸ ಬೇಕೆಂದಿರುವರು. ಅಂಥವರಿಗೆ ಬಹಳ ಕಾಲದಿಂದಿದ್ದ ತೀರ್ಪು ತಡವಾಗುವದಿಲ್ಲ. ಅವರಿಗಾಗುವ ನಾಶನವು ತೂಕಡಿಸುವದಿಲ್ಲ.

4ಹೇಗೆಂದರೆ ದೂತರು ಪಾಪಮಾಡಿದಾಗ ದೇವರು ಅವರನ್ನು ಸುಮ್ಮನೆ ಬಿಡದೆ ನರಕಕ್ಕೆ ದೊಬ್ಬಿ ನ್ಯಾಯ ತೀರ್ಪನ್ನು ಹೊಂದುವದಕ್ಕೆ ಇಡಲ್ಪಟ್ಟವರಾಗಿರ ಬೇಕೆಂದು ಕತ್ತಲೆಯ ಸಂಕೋಲೆಗಳಿಗೆ ಒಪ್ಪಿಸಿದನು.

5ಆತನು ಪುರಾತನ ಲೋಕವನ್ನು ಸುಮ್ಮನೆ ಬಿಡದೆ ಭಕ್ತಿಹೀನರ ಮೇಲೆ ಜಲಪ್ರಳಯವನ್ನು ಬರಮಾಡಿ ದನು; ಆದರೆ ನೀತಿಯನ್ನು ಸಾರುತ್ತಿದ್ದ ಎಂಟನೆಯ ವನಾದ ನೋಹನನ್ನು ರಕ್ಷಿಸಿದನು.

೨ ಪೇತ್ರನು 2 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी