ನಿಮ್ಮ ಸಂತೋಷವು ಪರಿಪೂರ್ಣ ವಾಗಬೇಕೆಂದು ನಾವು ಇವುಗಳನ್ನು ಬರೆಯುತ್ತೇವೆ.
2(ಆ ಜೀವವು ಪ್ರತ್ಯಕ್ಷವಾಯಿತು, ತಂದೆಯ ಬಳಿಯಲ್ಲಿದ್ದು ನಮಗೆ ಪ್ರತ್ಯಕ್ಷವಾದಂಥ ಆ ನಿತ್ಯಜೀವವನ್ನು ನಾವು ಕಂಡು ಅದನ್ನು ಕುರಿತು ಸಾಕ್ಷಿ ಹೇಳಿ ಅದನ್ನು ನಿಮಗೆ ತಿಳಿಯಪಡಿಸುತ್ತೇವೆ).
3ನಮಗಿರುವ ಅನ್ಯೋನ್ಯತೆಯಲ್ಲಿ ನೀವೂ ಇರ ಬೇಕೆಂದು ನಾವು ಕಂಡು ಕೇಳಿದ್ದನ್ನು ನಿಮಗೆ ಪ್ರಸಿದ್ಧಿ ಪಡಿಸುತ್ತೇವೆ. ನಿಜವಾಗಿಯೂ ನಮಗಿರುವ ಅನ್ಯೋನ್ಯತೆಯು ತಂದೆಯ ಸಂಗಡಲೂ ಆತನ ಮಗನಾದ ಯೇಸು ಕ್ರಿಸ್ತನ ಸಂಗಡಲೂ ಇರು ವಂಥದ್ದು.
4ನಿಮ್ಮ ಸಂತೋಷವು ಪರಿಪೂರ್ಣ ವಾಗಬೇಕೆಂದು ನಾವು ಇವುಗಳನ್ನು ಬರೆಯುತ್ತೇವೆ.
5ನಾವು ಆತನಿಂದ ಕೇಳಿ ನಿಮಗೆ ತಿಳಿಸುವ ವಾರ್ತೆ ಯಾವದಂದರೆ--ದೇವರು ಬೆಳಕಾಗಿದ್ದಾನೆ; ಆತನಲ್ಲಿ ಎಷ್ಟು ಮಾತ್ರವೂ ಕತ್ತಲೆಯಿಲ್ಲ ಎಂಬದೇ.
6ನಾವು ಆತನ ಸಂಗಡ ಅನ್ಯೋನ್ಯತೆಯುಳ್ಳವರಾಗಿದ್ದೇವೆಂದು ಹೇಳಿ ಕತ್ತಲೆಯಲ್ಲಿ ನಡೆದರೆ ಸುಳ್ಳಾಡುವವರಾಗಿದ್ದೇವೆ, ಸತ್ಯವನ್ನನುಸರಿಸುವವರಲ್ಲ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ