ದಾನಿಯೇಲನು 6:21

ಆಗ ದಾನಿಯೇಲನು ಅರಸನಿಗೆ--ಓ ಅರಸನೇ, ನೀನು ನಿರಂತರವಾಗಿ ಬಾಳು.

ಸಂದರ್ಭದೊಂದಿಗೆ ಓದಿ · ದಾನಿಯೇಲನು 6

19ಮುಂಜಾನೆಗೆ ಮೊದಲೇ ಅರಸನು ಎದ್ದು ತ್ವರೆಯಾಗಿ ಸಿಂಹಗಳ ಗವಿಯ ಬಳಿಗೆ ಹೋದನು.

20ಗವಿಯ ಹತ್ತಿರ ಬಂದಾಗ ದುಃಖದ ಧ್ವನಿಯಲ್ಲಿ ದಾನಿಯೇಲನ ಕಡೆಗೆ ಕೂಗಿದನು; ಅರಸನು ಮಾತನಾಡಿ ದಾನಿಯೇಲನಿಗೆ--ಜೀವವುಳ್ಳ ದೇವರ ಸೇವಕನಾದ ಓ ದಾನಿಯೇಲನೇ, ನೀನು ಯಾವಾ ಗಲೂ ಸೇವಿಸುವ ಆ ನಿನ್ನ ದೇವರು ನಿನ್ನನ್ನು ಸಿಂಹಗಳಿಂದ ಬಿಡಿಸಲು ಸಮರ್ಥನಾಗಿದ್ದಾನೆಯೇ? ಎಂದು ಕೇಳಿದನು.

21ಆಗ ದಾನಿಯೇಲನು ಅರಸನಿಗೆ--ಓ ಅರಸನೇ, ನೀನು ನಿರಂತರವಾಗಿ ಬಾಳು.

22ನನ್ನ ದೇವರು ತನ್ನ ದೂತನನ್ನು ಕಳುಹಿಸಿ ನನಗೆ ಕೇಡು ಮಾಡದ ಹಾಗೆ ಸಿಂಹಗಳ ಬಾಯಿಗಳನ್ನು ಮುಚ್ಚಿ ಹಾಕಿದ್ದಾನೆ; ಆತನ ಮುಂದೆ ನಾನು ಯಥಾರ್ಥನೆಂದು ತಿಳಿದುಬಂದಿದ್ದೇನೆ. ಓ ಅರಸನೇ, ನಿನ್ನ ಮುಂದೆಯೂ ಸಹ ನಾನು ಯಾರಿಗೂ ಕೇಡುಮಾಡಲಿಲ್ಲ ಎಂದು ಹೇಳಿದನು.

23ಆಗ ಅರಸನು ಅವನ ವಿಷಯದಲ್ಲಿ ಬಹಳ ಸಂತೋಷಪಟ್ಟು ದಾನಿಯೇಲನನ್ನು ಗವಿಯೊಳ ಗಿಂದ ಮೇಲಕ್ಕೆತ್ತಬೇಕೆಂದು ಆಜ್ಞೆ ಮಾಡಿದನು; ಹೀಗೆ ದಾನಿಯೇಲನನ್ನು ಗವಿಯೊಳಗಿಂದ ಮೇಲಕೆತ್ತಿದರು ಮತ್ತು ಅವನು ತನ್ನ ದೇವರಲ್ಲಿ ನಂಬಿಕೆಯಿಟ್ಟದ್ದರಿಂದ ಯಾವ ತರಹ ಹಾನಿಯೂ ಅವನಲ್ಲಿ ಕಾಣಲಿಲ್ಲ.

ದಾನಿಯೇಲನು 6 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी