ಯೆರೆಮಿಯ 30:18

ಕರ್ತನು ಹೀಗೆ ಹೇಳುತ್ತಾನೆ--ಇಗೋ, ನಾನು ಯಾಕೋಬನ ಗುಡಾರಗಳ ಸೆರೆಯನ್ನು ತಿರುಗಿ ತರುತ್ತೇನೆ; ಅವನ ನಿವಾಸಗಳನ್ನು ಕರುಣಿಸುತ್ತೇನೆ; ಪಟ್ಟಣವು ಅದರ ದಿಣ್ಣೆಯ ಮೇಲೆ ಕಟ್ಟಲ್ಪಡುವದು; ಅರಮನೆಯು ತಕ್ಕಸ್ಥಳದಲ್ಲಿ ನೆಲೆಯಾಗಿರುವದು.

ಸಂದರ್ಭದೊಂದಿಗೆ ಓದಿ · ಯೆರೆಮಿಯ 30

16ಆದರೂ ನಿನ್ನನ್ನು ನುಂಗುವವರೆಲ್ಲರೂ ನುಂಗಲ್ಪಡು ವರು; ನಿನ್ನ ವಿರೋಧಿಗಳಲ್ಲಿ ಪ್ರತಿಯೊಬ್ಬನೂ ಸೆರೆಗೆ ಹೋಗುವನು; ನಿನ್ನನ್ನು ಕೊಳ್ಳೆಮಾಡುವವರು ಕೊಳ್ಳೆ ಯಾಗುವರು; ನಿನಗೆ ಬಲೆ ಬೀಸುವವರೆಲ್ಲರನ್ನು ನಾನು ಬಲೆಗೆ ಒಪ್ಪಿಸುವೆನು.

17ಚೀಯೋನು ತಳ್ಳಿಬಿಡಲ್ಪ ಟ್ಟದ್ದೂ ಅದನ್ನು ವಿಚಾರಿಸುವವರು ಯಾರೂ ಇಲ್ಲ ವೆಂದೂ ಅವರು ನಿನ್ನ ವಿಷಯ ಹೇಳುವದರಿಂದ ನಿನಗೆ ಕ್ಷೇಮವನ್ನುಂಟು ಮಾಡುವೆನು; ನಿನ್ನ ಗಾಯ ಗಳನ್ನು ಸ್ವಸ್ಥ ಮಾಡುವೆನೆಂದು ಕರ್ತನು ಅನ್ನುತ್ತಾನೆ.

18ಕರ್ತನು ಹೀಗೆ ಹೇಳುತ್ತಾನೆ--ಇಗೋ, ನಾನು ಯಾಕೋಬನ ಗುಡಾರಗಳ ಸೆರೆಯನ್ನು ತಿರುಗಿ ತರುತ್ತೇನೆ; ಅವನ ನಿವಾಸಗಳನ್ನು ಕರುಣಿಸುತ್ತೇನೆ; ಪಟ್ಟಣವು ಅದರ ದಿಣ್ಣೆಯ ಮೇಲೆ ಕಟ್ಟಲ್ಪಡುವದು; ಅರಮನೆಯು ತಕ್ಕಸ್ಥಳದಲ್ಲಿ ನೆಲೆಯಾಗಿರುವದು.

19ಅವುಗಳೊಳಗಿಂದ ಕೃತಜ್ಞತಾ ಸ್ತೋತ್ರವೂ ಸಂತೋ ಷಪಡುವವರ ಸ್ವರವೂ ಹೊರಡುವದು; ಅವರನ್ನು ಅಭಿವೃದ್ಧಿಮಾಡುವೆನು; ಅವರು ಕೊಂಚವಾಗಿರರು, ಅವರು ಅಲ್ಪವಾಗದ ಹಾಗೆ ಅವರಿಗೆ ಘನವನ್ನು ಕೊಡುವೆನು.

20ಅವರ ಮಕ್ಕಳು ಸಹ ಪೂರ್ವ ಕಾಲದ ಹಾಗೆ ಇರುವರು; ಅವರ ಸಭೆಯು ನನ್ನ ಮುಂದೆ ಸ್ಥಾಪಿಸಲ್ಪಡುವದು; ಅವರನ್ನು ಬಾಧಿಸುವವರೆಲ್ಲರನ್ನು ವಿಚಾರಿಸುವೆನು.

ಯೆರೆಮಿಯ 30 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी