೨ ಅರಸುಗಳು 4:3

ಆಗ ಅವನು--ನೀನು ಹೋಗಿ ಹೊರಗಿರುವ ನಿನ್ನ ಎಲ್ಲಾ ನೆರೆಮನೆಯವರಿಂದ ಬರೀ ಪಾತ್ರೆಗಳನ್ನು ಕೇಳಿಕೋ; ಸ್ವಲ್ಪಮಾತ್ರ ತಕ್ಕೊಳ್ಳಬೇಡ.

ಸಂದರ್ಭದೊಂದಿಗೆ ಓದಿ · ೨ ಅರಸುಗಳು 4

1ಪ್ರವಾದಿಗಳ ಮಕ್ಕಳ ಹೆಂಡತಿಯರಲ್ಲಿ ಒಬ್ಬಳು ಎಲೀಷನಿಗೆ ಕೂಗಿ--ನಿನ್ನ ದಾಸ ನಾದ ನನ್ನ ಗಂಡನು ಸತ್ತನು; ನಿನ್ನ ದಾಸನು ಕರ್ತನಿಗೆ ಭಯಪಡುವವನಾಗಿದ್ದನೆಂದು ನೀನು ಬಲ್ಲೆ; ಈಗ ಸಾಲಗಾರನು ನನ್ನ ಇಬ್ಬರು ಮಕ್ಕಳನ್ನು ತನಗೆ ದಾಸ ರಾಗಿ ತೆಗೆದುಕೊಳ್ಳಲು ಬಂದಿದ್ದಾನೆ ಅಂದಳು.

2ಎಲೀ ಷನು ಅವಳಿಗೆ--ನಾನು ನಿನಗೆ ಏನು ಮಾಡಬೇಕು? ಮನೆಯಲ್ಲಿ ನಿನಗೆ ಏನು ಉಂಟು, ನನಗೆ ತಿಳಿಸು ಅಂದನು. ಅವಳು--ನಿನ್ನ ಸೇವಕಳಿಗೆ ಒಂದು ಮೊಗೆ ಎಣ್ಣೆ ಅಲ್ಲದೆ ಮನೆಯಲ್ಲಿ ಮತ್ತೊಂದಿಲ್ಲ ಅಂದಳು.

3ಆಗ ಅವನು--ನೀನು ಹೋಗಿ ಹೊರಗಿರುವ ನಿನ್ನ ಎಲ್ಲಾ ನೆರೆಮನೆಯವರಿಂದ ಬರೀ ಪಾತ್ರೆಗಳನ್ನು ಕೇಳಿಕೋ; ಸ್ವಲ್ಪಮಾತ್ರ ತಕ್ಕೊಳ್ಳಬೇಡ.

4ನೀನು ಒಳಗೆ ಪ್ರವೇಶಿಸಿ ನೀನೂ ನಿನ್ನ ಕುಮಾರರೂ ಬಾಗಲು ಮುಚ್ಚಿ ಕೊಂಡು ಎಣ್ಣೆಯನ್ನು ಆ ಪಾತ್ರೆಗಳಲ್ಲೆಲ್ಲಾ ಹೊಯಿದು ತುಂಬಿದ್ದನ್ನು ಒಂದು ಕಡೆ ಇರಿಸು ಅಂದನು.

5ಹೀಗೆ ಅವಳು ಅವನನ್ನು ಬಿಟ್ಟು ಹೋಗಿ ತಾನೂ ತನ್ನ ಕುಮಾರರೂ ಬಾಗಲು ಮುಚ್ಚಿದರು; ಇವರು ಅವಳ ಬಳಿಗೆ ಪಾತ್ರೆಗಳನ್ನು ತಕ್ಕೊಂಡು ಬಂದರು; ಅವಳು ಹೊಯಿದಳು.

೨ ಅರಸುಗಳು 4 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी