ಅಪೊಸ್ತಲರ ಕೃತ್ಯಗಳು 5:38

ಈಗ ನಾನು ನಿಮಗೆ ಹೇಳುವದೇನಂದರೆ--ಈ ಮನುಷ್ಯರ ಗೊಡವೆಗೆ ಹೋಗಬೇಡಿರಿ, ಅವರನ್ನು ಬಿಡಿರಿ; ಈ ಯೋಚನೆಯು ಅಥವಾ ಈ ಕಾರ್ಯವು ಮನುಷ್ಯರಿಂದಾಗಿದ್ದರೆ ಅದು ನಿಷ್ಫಲವಾಗುವದು.

ಸಂದರ್ಭದೊಂದಿಗೆ ಓದಿ · ಅಪೊಸ್ತಲರ ಕೃತ್ಯಗಳು 5

36ಇದಕ್ಕಿಂತ ಮುಂಚೆ ಥೈದನು ಎದ್ದು ತಾನೊಬ್ಬ ಗಣ್ಯವ್ಯಕ್ತಿ ಎಂದು ತನ್ನ ವಿಷಯವಾಗಿ ತಾನೇ ಕೊಚ್ಚಿಕೊಂಡಾಗ ಸುಮಾರು ನಾನೂರು ಜನರು ಅವನೊಂದಿಗೆ ಸೇರಿಕೊಂಡರು; ಅವನು ಕೊಲ್ಲಲ್ಪಟ್ಟದ್ದರಿಂದ ಅವನಿಗೆ ವಿಧೇಯರಾಗಿ ದ್ದವರೆಲ್ಲರೂ ಚದರಿಹೋಗಿ ಇಲ್ಲವಾದರು.

37ಈ ಮನುಷ್ಯನ ತರುವಾಯ ಖಾನೇಷುಮಾರಿಯ ದಿನ ಗಳಲ್ಲಿ ಗಲಿಲಾಯದ ಯೂದನು ಎದ್ದು ತನ್ನನ್ನು ಹಿಂಬಾಲಿಸುವಂತೆ ಅನೇಕ ಜನರನ್ನು ಸೆಳೆದನು. ಆದರೆ ಅವನು ಸಹ ನಾಶವಾದನು. ಅವನಿಗೆ ವಿಧೇಯರಾದ ವರೆಲ್ಲರೂ ಚದರಿಹೋದರು ಎಂದು ಹೇಳಿದನು.

38ಈಗ ನಾನು ನಿಮಗೆ ಹೇಳುವದೇನಂದರೆ--ಈ ಮನುಷ್ಯರ ಗೊಡವೆಗೆ ಹೋಗಬೇಡಿರಿ, ಅವರನ್ನು ಬಿಡಿರಿ; ಈ ಯೋಚನೆಯು ಅಥವಾ ಈ ಕಾರ್ಯವು ಮನುಷ್ಯರಿಂದಾಗಿದ್ದರೆ ಅದು ನಿಷ್ಫಲವಾಗುವದು.

39ಅದು ದೇವರಿಂದಾಗಿದ್ದರೆ ನೀವು ಅದನ್ನು ಗೆಲ್ಲಲಾರಿರಿ; ಒಂದು ವೇಳೆ ನೀವು ದೇವರಿಗೆ ವಿರುದ್ಧ ವಾಗಿ ಹೋರಾಡುವವರಾಗಿ ಕಾಣಿಸಿಕೊಂಡೀರಿ ಎಂದು ಹೇಳಿದನು.

40ಇದಕ್ಕೆ ಅವರು ಅವನೊಂದಿಗೆ ಒಪ್ಪಿಕೊಂಡು ಅಪೊಸ್ತಲರನ್ನು ಕರೆಯಿಸಿ ಅವರನ್ನು ಹೊಡೆದು ಯೇಸುವಿನ ಹೆಸರಿನಲ್ಲಿ ಮಾತನಾಡಬಾರದೆಂದು ಅಪ್ಪಣೆ ಕೊಟ್ಟು ಬಿಟ್ಟುಬಿಟ್ಟರು.

ಅಪೊಸ್ತಲರ ಕೃತ್ಯಗಳು 5 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी