ಲೂಕನು 15:22

ಆದರೆ ತಂದೆಯು ತನ್ನ ಸೇವಕರಿಗೆ--ಶ್ರೇಷ್ಠವಾದ ನಿಲುವಂಗಿಯನ್ನು ತಂದು ಇವನಿಗೆ ತೊಡಿಸಿರಿ; ಇವನ ಕೈಗೆ ಉಂಗುರವನ್ನೂ ಪಾದಗಳಿಗೆ ಕೆರಗಳನ್ನೂ ಹಾಕಿರಿ;

ಸಂದರ್ಭದೊಂದಿಗೆ ಓದಿ · ಲೂಕನು 15

20ಎದ್ದು ತನ್ನ ತಂದೆಯ ಬಳಿಗೆ ಬಂದನು. ಆದರೆ ಅವನು ಇನ್ನೂ ಬಹಳ ದೂರದಲ್ಲಿರುವಾಗಲೇ ಅವನ ತಂದೆಯು ಅವನನ್ನು ನೋಡಿ ಕನಿಕರಪಟ್ಟು ಓಡಿಬಂದು ಅವನ ಕೊರಳನ್ನು ಅಪ್ಪಿಕೊಂಡು ಅವನಿಗೆ ಮುದ್ದಿಟ್ಟನು.

21ಮಗನು ಅವನಿಗೆ--ಅಪ್ಪಾ, ನಾನು ಪರಲೋಕಕ್ಕೆ ವಿರೋಧ ವಾಗಿಯೂ ನಿನ್ನ ದೃಷ್ಟಿಯಲ್ಲಿಯೂ ಪಾಪ ಮಾಡಿದ್ದೇನೆ; ನಿನ್ನ ಮಗನೆನಿಸಿಕೊಳ್ಳುವದಕ್ಕೆ ಇನ್ನೆಂದಿಗೂ ನಾನು ಯೋಗ್ಯನಲ್ಲ ಅಂದನು.

22ಆದರೆ ತಂದೆಯು ತನ್ನ ಸೇವಕರಿಗೆ--ಶ್ರೇಷ್ಠವಾದ ನಿಲುವಂಗಿಯನ್ನು ತಂದು ಇವನಿಗೆ ತೊಡಿಸಿರಿ; ಇವನ ಕೈಗೆ ಉಂಗುರವನ್ನೂ ಪಾದಗಳಿಗೆ ಕೆರಗಳನ್ನೂ ಹಾಕಿರಿ;

23ಇದಲ್ಲದೆ ಕೊಬ್ಬಿದ ಆ ಕರುವನ್ನು ಇಲ್ಲಿ ತಂದು ವಧಿಸಿರಿ; ನಾವು ಉಂಡು ಸಂತೋಷಪಡೋಣ;

24ಯಾಕಂದರೆ ಈ ನನ್ನ ಮಗನು ಸತ್ತವನಾಗಿದ್ದನು, ತಿರಿಗಿ ಬದುಕಿದ್ದಾನೆ; ಕಳೆದು ಹೋಗಿದ್ದನು, ಈಗ ಸಿಕ್ಕಿದ್ದಾನೆ ಎಂದು ಹೇಳಿದನು; ಹೀಗೆ ಅವರು ಸಂತೋಷ ಪಡಲಾರಂಭಿಸಿದರು.

ಲೂಕನು 15 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी