ಯೆಹೆಜ್ಕೇಲನು 39:27

ನಾನು ಅವರನ್ನು ಜನಗಳೊಳಗಿಂದ ಮತ್ತೆ ತಂದ ಮೇಲೆ ಅವರ ಶತ್ರುಗಳ ದೇಶದೊಳಗಿಂದ ಅವರನ್ನು ಕೂಡಿಸಿ ಅನೇಕ ಜನಾಂಗ ಗಳ ಮುಂದೆ ಅವರಲ್ಲಿ ಪರಿಶುದ್ಧನಾಗುವೆನು;

ಸಂದರ್ಭದೊಂದಿಗೆ ಓದಿ · ಯೆಹೆಜ್ಕೇಲನು 39

25ಆದದರಿಂದ ದೇವರಾದ ಕರ್ತನು ಹೀಗೆ ಹೇಳು ತ್ತಾನೆ--ಈಗ ನಾನು ಯಾಕೋಬಿನ ಸೆರೆಯನ್ನು ತಿರಿಗಿ ತರುತ್ತೇನೆ, ಸಂಪೂರ್ಣ ಇಸ್ರಾಯೇಲಿನ ಮನೆತನದ ವರ ಮೇಲೆ ಕರುಣೆಯಿಡುತ್ತೆನೆ; ನನ್ನ ಪರಿಶುದ್ಧ ಹೆಸರಿಗಾಗಿ ಸ್ವಗೌರವುಳ್ಳವನಾಗಿರುವೆನು.

26ಅವರು ಹೆದರಿಸುವವರಿಲ್ಲದೆ ಕ್ಷೇಮವಾಗಿ ತಮ್ಮ ದೇಶದಲ್ಲಿ ವಾಸಮಾಡಿದಾಗ ಉಂಟಾದ ತಮ್ಮ ನಾಚಿಕೆಯನ್ನೂ ನನಗೆ ವಿರೋಧವಾಗಿ ಅತಿಕ್ರಮಿಸಿದ ಎಲ್ಲಾ ಅತಿಕ್ರಮ ಗಳನ್ನು ಹೊತ್ತ ತರುವಾಯ,

27ನಾನು ಅವರನ್ನು ಜನಗಳೊಳಗಿಂದ ಮತ್ತೆ ತಂದ ಮೇಲೆ ಅವರ ಶತ್ರುಗಳ ದೇಶದೊಳಗಿಂದ ಅವರನ್ನು ಕೂಡಿಸಿ ಅನೇಕ ಜನಾಂಗ ಗಳ ಮುಂದೆ ಅವರಲ್ಲಿ ಪರಿಶುದ್ಧನಾಗುವೆನು;

28ಆಮೇಲೆ ಅವರನ್ನು ಅನ್ಯಜನಾಂಗಗಳೊಳಗಿಂದ ಸೆರೆಗೈದವನೂ ಇನ್ನು ಮೇಲೆ ಅವರಲ್ಲಿ ಒಬ್ಬನನ್ನಾದರೂ ಉಳಿಸದೆ ದೇಶಕ್ಕೆ ಕೂಡಿಸಿದವನು ನಾನೇ ಅವರ ದೇವರಾದ ಕರ್ತನೆಂದು ಅವರು ತಿಳಿಯುವರು.

29ಇಲ್ಲವೇ ನಾನು ನನ್ನ ಮುಖವನ್ನು ಎಂದಿಗೂ ಮರೆಮಾಡುವದಿಲ್ಲ; ನಾನು ನನ್ನ ಆತ್ಮವನ್ನು ಇಸ್ರಾ ಯೇಲಿನ ಮನೆತನದವರ ಮೇಲೆ ಸುರಿದಿರುವೆನೆಂದು ದೇವರಾದ ಕರ್ತನು ಹೇಳುತ್ತಾನೆ.

ಯೆಹೆಜ್ಕೇಲನು 39 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी