ಮತ್ತು ಆತನು ಅವರಿಗೆ--ಈ ಸಾಮ್ಯವು ನಿಮಗೆ ತಿಳಿಯ ಲಿಲ್ಲವೋ? ಹಾಗಾದರೆ ಎಲ್ಲಾ ಸಾಮ್ಯಗಳನ್ನು ನೀವು ಹೇಗೆ ತಿಳಿದುಕೊಳ್ಳುವಿರಿ?
11ಅದಕ್ಕೆ ಆತನು ಅವರಿಗೆ--ದೇವರ ರಾಜ್ಯದ ಮರ್ಮವನ್ನು ತಿಳಿದುಕೊಳ್ಳಲು ನಿಮಗೆ ಕೊಡಲ್ಪಟ್ಟಿದೆ. ಆದರೆ ಹೊರಗಿನವರಿಗೆ ಇವೆಲ್ಲವುಗಳು ಸಾಮ್ಯಗಳಿಂದ ಹೇಳಲ್ಪಡುತ್ತವೆ.
12ಯಾಕಂದರೆ ಅವರು ದೃಷ್ಟಿಯಿ ದ್ದರೂ ನೋಡಿ ತಿಳುಕೊಳ್ಳದಂತೆ ಕೇಳಿದರೂ ಕೇಳಿ ಗ್ರಹಿಸದಂತೆ ಮತ್ತು ಅವರು ತಿರುಗಿಕೊಂಡು ತಮ್ಮ ಪಾಪಗಳಿಂದ ಕ್ಷಮಿಸಲ್ಪಡದಂತೆ ಆಗುವದು.
13ಮತ್ತು ಆತನು ಅವರಿಗೆ--ಈ ಸಾಮ್ಯವು ನಿಮಗೆ ತಿಳಿಯ ಲಿಲ್ಲವೋ? ಹಾಗಾದರೆ ಎಲ್ಲಾ ಸಾಮ್ಯಗಳನ್ನು ನೀವು ಹೇಗೆ ತಿಳಿದುಕೊಳ್ಳುವಿರಿ?
14ಬಿತ್ತುವವನು ವಾಕ್ಯವನ್ನು ಬಿತ್ತುತ್ತಾನೆ.
15ದಾರಿಯ ಮಗ್ಗುಲಲ್ಲಿ ವಾಕ್ಯವು ಬಿತ್ತಲ್ಪಟ್ಟವರು ಇವರೇ; ಆದರೆ ಇವರು ಕೇಳಿದಾಗ ಸೈತಾನನು ಕೂಡಲೆ ಬಂದು ಅವರ ಹೃದಯಗಳಲ್ಲಿ ಬಿತ್ತಲ್ಪಟ್ಟಿದ್ದ ವಾಕ್ಯವನ್ನು ತೆಗೆದು ಬಿಡುತ್ತಾನೆ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ