ಎಸ್ತೇರಳು 7:3

ಆಗ ರಾಣಿಯಾದ ಎಸ್ತೇರಳು ಪ್ರತ್ಯುತ್ತರ ಕೊಟ್ಟು--ಓ ಅರಸನೇ, ನಾನು ನಿನ್ನ ಮುಂದೆ ದಯ ಹೊಂದಿದ ವಳಾಗಿದ್ದರೆ ಅದು ಅರಸನಿಗೆ ಮೆಚ್ಚಿಕೆಯಾಗಿದ್ದರೆ ನನ್ನ ಬೇಡುವಿಕೆಗೆ ನನ್ನ ಪ್ರಾಣವೂ ನನ್ನ ವಿಜ್ಞಾಪನೆಗೆ ನನ್ನ ಜನವೂ ಕೊಡಲ್ಪಡಲಿ.

ಸಂದರ್ಭದೊಂದಿಗೆ ಓದಿ · ಎಸ್ತೇರಳು 7

1ಅರಸನೂ ಹಾಮಾನನೂ ರಾಣಿಯಾದ ಎಸ್ತೇರಳ ಔತಣಕ್ಕೆ ಬಂದರು.

2ಎರಡನೇ ದಿನ ದ್ರಾಕ್ಷಾರಸದ ಔತಣಕ್ಕೆ ಬಂದಾಗ ಅರಸನು ಮತ್ತೂ ಎಸ್ತೇರಳಿಗೆ--ರಾಣಿಯಾದ ಎಸ್ತೇರಳೇ, ನಿನ್ನ ಬೇಡುವಿಕೆ ಏನು? ಅದು ನಿನಗೆ ಕೊಡಲ್ಪಡುವದು; ನಿನ್ನ ವಿಜ್ಞಾಪನೆ ಏನು? ಅದು ನನ್ನ ರಾಜ್ಯದ ಅರ್ಧದ ವರೆಗೆ ಇದ್ದರೂ ಕೊಡಲ್ಪಡುವದು ಅಂದನು.

3ಆಗ ರಾಣಿಯಾದ ಎಸ್ತೇರಳು ಪ್ರತ್ಯುತ್ತರ ಕೊಟ್ಟು--ಓ ಅರಸನೇ, ನಾನು ನಿನ್ನ ಮುಂದೆ ದಯ ಹೊಂದಿದ ವಳಾಗಿದ್ದರೆ ಅದು ಅರಸನಿಗೆ ಮೆಚ್ಚಿಕೆಯಾಗಿದ್ದರೆ ನನ್ನ ಬೇಡುವಿಕೆಗೆ ನನ್ನ ಪ್ರಾಣವೂ ನನ್ನ ವಿಜ್ಞಾಪನೆಗೆ ನನ್ನ ಜನವೂ ಕೊಡಲ್ಪಡಲಿ.

4ಯಾಕಂದರೆ ನಾನೂ ನನ್ನ ಜನವೂ ಸಂಹರಿಸಲ್ಪಡುವದಕ್ಕೂ ಕೊಲ್ಲಲ್ಪ ಡುವದಕ್ಕೂ ನಾಶಮಾಡಲ್ಪಡುವದಕ್ಕೂ ಮಾರಲ್ಪಟ್ಟೆವು. ನಾವು ದಾಸದಾಸಿಗಳಾಗಿ ಮಾರಲ್ಪಟ್ಟಿದ್ದರೆ ನಾನು ಸುಮ್ಮನೆ ಇರುತ್ತಿದ್ದೆನು; ಆದರೆ ವೈರಿ ಅರಸನ ನಷ್ಟಕ್ಕೆ ಸರಿಯಾಗಿ ಕೊಡಲಾರನು ಅಂದಳು.

5ಆಗ ಅರಸ ನಾದ ಅಹಷ್ವೇರೋಷನು--ರಾಣಿಯಾದ ಎಸ್ತೇರಳಿಗೆ ಪ್ರತ್ಯುತ್ತರವಾಗಿ ಈ ಪ್ರಕಾರ ಮಾಡಲು ತನ್ನ ಹೃದಯ ತುಂಬಿಕೊಂಡವನು ಯಾರು? ಅವನು ಎಲ್ಲಿ ಅಂದನು.

ಎಸ್ತೇರಳು 7 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी