ಪ್ರಕಟನೆ 1:13

ಆ ಏಳು ದೀಪಸ್ತಂಭಗಳ ಮಧ್ಯದಲ್ಲಿ ಮನುಷ್ಯಕುಮಾರನಂತಿದ್ದಾತನನ್ನು ಕಂಡೆನು. ಆತನು ಪಾದದವರೆಗೆ ಇರುವ ನಿಲುವಂಗಿಯನ್ನು ತೊಟ್ಟು ಚಿನ್ನದ ಪಟ್ಟಿಯನ್ನು ಎದೆಗೆ ಕಟ್ಟಿಕೊಂಡಿದ್ದನು.

ಸಂದರ್ಭದೊಂದಿಗೆ ಓದಿ · ಪ್ರಕಟನೆ 1

11ಅದು--ನಾನೇ ಅಲ್ಫಾವೂ ಓಮೆಗವೂ ಮೊದಲನೆಯವನೂ ಕಡೆ ಯವನೂ ಆಗಿದ್ದೇನೆ; ನೀನು ನೋಡುವದನ್ನೂ ಪುಸ್ತಕದಲ್ಲಿ ಬರೆದು ಆಸ್ಯದಲ್ಲಿನ ಎಫೆಸ, ಸ್ಮುರ್ನ, ಪೆರ್ಗಮ, ಥುವತೈರ, ಸಾರ್ದಿಸ್‌, ಫಿಲದೆಲ್ಫಿಯ, ಲವೊದಿಕೀಯ ಎಂಬ ಈ ಏಳು ಸಭೆಗಳಿಗೆ ಅದನ್ನು ಕಳುಹಿಸಬೇಕೆಂದು ಹೇಳಿತು.

12ನನ್ನ ಸಂಗಡ ಮಾತ ನಾಡುತ್ತಿದ್ದ ಶಬ್ದವನ್ನು ನೋಡುವದಕ್ಕಾಗಿ ಹಿಂದಕ್ಕೆ ತಿರುಗಿದೆನು. ತಿರುಗಿದಾಗ ಚಿನ್ನದ ಏಳು ದೀಪಸ್ತಂಭ ಗಳನ್ನು ನಾನು ನೋಡಿದೆನು.

13ಆ ಏಳು ದೀಪಸ್ತಂಭಗಳ ಮಧ್ಯದಲ್ಲಿ ಮನುಷ್ಯಕುಮಾರನಂತಿದ್ದಾತನನ್ನು ಕಂಡೆನು. ಆತನು ಪಾದದವರೆಗೆ ಇರುವ ನಿಲುವಂಗಿಯನ್ನು ತೊಟ್ಟು ಚಿನ್ನದ ಪಟ್ಟಿಯನ್ನು ಎದೆಗೆ ಕಟ್ಟಿಕೊಂಡಿದ್ದನು.

14ಆತನ ತಲೆ ಮತ್ತು ಕೂದಲು ಬಿಳೀ ಉಣ್ಣೆಯಂತೆಯೂ ಹಿಮದಂತೆಯೂ ಬೆಳ್ಳಗಿತ್ತು. ಆತನ ಕಣ್ಣುಗಳು ಬೆಂಕಿಯ ಉರಿಯಂತೆ ಇದ್ದವು.

15ಆತನ ಪಾದಗಳು ಕುಲುಮೆ ಯಲ್ಲಿ ಕಾಯಿಸಿದ ಶುದ್ಧವಾದ ತಾಮ್ರದಂತೆಯೂ ಆತನ ಧ್ವನಿಯು ಜಲಪ್ರವಾಹದ ಘೋಷದಂತೆಯೂ ಇದ್ದವು.

ಪ್ರಕಟನೆ 1 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी