೧ ಅರಸುಗಳು 15:17

ಆಗ ಇಸ್ರಾಯೇಲಿನ ಅರಸನಾದ ಬಾಷನು ಯೆಹೂದಕ್ಕೆ ವಿರೋಧವಾಗಿ ಹೋಗಿ ಯೆಹೂದದ ಅರಸನಾದ ಆಸನ ಬಳಿಗೆ ಒಳಗಾಗಲಿ ಹೊರಗಾಗಲಿ ಯಾರೂ ಹೋಗದ ಹಾಗೆ ರಾಮವನ್ನು ಕಟ್ಟಿಸಿದನು.

ಸಂದರ್ಭದೊಂದಿಗೆ ಓದಿ · ೧ ಅರಸುಗಳು 15

15ತಾನೂ ತನ್ನ ತಂದೆಯೂ ಅರ್ಪಿಸಿದ ಬೆಳ್ಳಿಯೂ ಬಂಗಾರವೂ ಸಾಮಾನುಗಳೂ ಅಂತೂ ಪ್ರತಿಷ್ಠಿಸಿದವುಗಳನ್ನು ಅವನು ಕರ್ತನ ಮಂದಿರಕ್ಕೆ ತಂದನು.

16ಆಸನಿಗೂ ಇಸ್ರಾಯೇಲಿನ ಅರಸನಾದ ಬಾಷ ನಿಗೂ ಅವರ ಜೀವಾಂತ್ಯದ ವರೆಗೆ ಯುದ್ಧ ನಡೆಯು ತ್ತಿತ್ತು.

17ಆಗ ಇಸ್ರಾಯೇಲಿನ ಅರಸನಾದ ಬಾಷನು ಯೆಹೂದಕ್ಕೆ ವಿರೋಧವಾಗಿ ಹೋಗಿ ಯೆಹೂದದ ಅರಸನಾದ ಆಸನ ಬಳಿಗೆ ಒಳಗಾಗಲಿ ಹೊರಗಾಗಲಿ ಯಾರೂ ಹೋಗದ ಹಾಗೆ ರಾಮವನ್ನು ಕಟ್ಟಿಸಿದನು.

18ಆಗ ಆಸನು ಕರ್ತನ ಮಂದಿರದ ಬೊಕ್ಕಸಗಳನ್ನೂ ಮಿಕ್ಕ ಸಮಸ್ತ ಬೆಳ್ಳಿ ಬಂಗಾರವನ್ನು ಅರಮನೆಯ ಬೊಕ್ಕಸಗಳಲ್ಲಿ ತೆಗೆದು ತನ್ನ ಸೇವಕರ ಕೈಯಲ್ಲಿ ಒಪ್ಪಿಸಿ ದಮಸ್ಕ ಪಟ್ಟಣದಲ್ಲಿ ವಾಸವಾಗಿರುವ ಹೆಜ್ಯೋನನ ಮೊಮ್ಮಗನೂ ಟಬ್ರಿಮ್ಮೋನನ ಮಗನೂ ಆಗಿರುವ ಅರಾಮಿನ ಅರಸನಾದ ಬೆನ್ಹದದನಿಗೆ ಅವುಗಳನ್ನು ಕಳುಹಿಸಿ--ನನಗೂ ನಿನಗೂ ನನ್ನ ತಂದೆಗೂ ನಿನ್ನ ತಂದೆಗೂ ಒಡಂಬಡಿಕೆ ಉಂಟಲ್ಲಾ.

19ಇಗೋ, ನಾನು ಬೆಳ್ಳಿ ಬಂಗಾರವನ್ನು ಕಾಣಿಕೆಯಾಗಿ ನಿನ್ನ ಬಳಿಗೆ ಕಳುಹಿಸಿದ್ದೇನೆ. ಇಸ್ರಾಯೇಲಿನ ಅರಸನಾದ ಬಾಷನು ನನ್ನನ್ನು ಬಿಟ್ಟು ಹೋಗುವ ಹಾಗೆ ನೀನು ಬಂದು ಅವನ ಸಂಗಡ ಮಾಡಿದ ನಿನ್ನ ಒಡಂಬಡಿಕೆಯನ್ನು ಮುರಿಯಬೇಕು ಅಂದನು.

೧ ಅರಸುಗಳು 15 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी