ನಾವು ಪ್ರಯಾಸಪಟ್ಟು ಮಾಡಿದವು ಗಳನ್ನು ಕಳಕೊಳ್ಳದೆ ಪ್ರತಿಫಲವನ್ನು ಹೊಂದುವಂತೆ ನಿಮ್ಮನ್ನು ನೀವೇ ನೋಡಿಕೊಳ್ಳಿರಿ.
6ಆತನ ಆಜ್ಞೆಗಳನ್ನು ಅನುಸರಿಸಿ ನಡೆಯುವದೇ ಪ್ರೀತಿ; ಪ್ರೀತಿಯಲ್ಲಿ ನಡೆಯ ಬೇಕೆಂಬದೇ ನೀವು ಮೊದಲಿನಿಂದಲೂ ಕೇಳಿದ ಅಪ್ಪಣೆಯಾಗಿದೆ.
7ಶರೀರದಲ್ಲಿ ಬಂದಿರುವ ಯೇಸು ಕ್ರಿಸ್ತನ್ನು ಒಪ್ಪದೆ ಇರುವ ಮೋಸಗಾರರು ಅನೇಕ ಮಂದಿ ಹೊರಟು ಲೋಕದೊಳಗೆ ಹೋಗಿದ್ದಾರೆ. ಇಂಥವನೇ ಮೋಸಗಾರನೂ ಕ್ರಿಸ್ತ ವಿರೋಧಿಯೂ ಆಗಿದ್ದಾನೆ.
8ನಾವು ಪ್ರಯಾಸಪಟ್ಟು ಮಾಡಿದವು ಗಳನ್ನು ಕಳಕೊಳ್ಳದೆ ಪ್ರತಿಫಲವನ್ನು ಹೊಂದುವಂತೆ ನಿಮ್ಮನ್ನು ನೀವೇ ನೋಡಿಕೊಳ್ಳಿರಿ.
9ಕ್ರಿಸ್ತನ ಬೋಧನೆಯಲ್ಲಿ ನೆಲೆಗೊಳ್ಳದೆ ಅದನ್ನು ಅತಿಕ್ರಮಿ ಸುವವನಿಗೆ ದೇವರಿಲ್ಲ; ಕ್ರಿಸ್ತನ ಬೋಧನೆಯಲ್ಲಿ ನೆಲೆ ಗೊಂಡಿರುವವನಿಗೆ ತಂದೆಯೂ ಮಗನೂ ಇದ್ದಾರೆ.
10ಈ ಬೋಧನೆಯನ್ನು ತಾರದಿರುವ ಯಾವನಾದರೂ ನಿಮ್ಮ ಬಳಿಗೆ ಬಂದರೆ ಅವನನ್ನು ಮನೆಯೊಳಗೆ ಸೇರಿಸಿ ಕೊಳ್ಳಬೇಡಿರಿ; ಅವನಿಗೆ ವಂದನೆ ಎಂದು ಹೇಳಬೇಡಿರಿ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ