ಯಾಜಕಕಾಂಡ 27:23

ಯಾಜಕನು ಅವನಿಗೆ ನೀನು ನೇಮಿಸಿದ ಕ್ರಯದ ಹಣವನ್ನು ಜೂಬಿಲಿ ಸಂವತ್ಸರದ ವರೆಗೂ ಎಣಿಸಬೇಕು; ಅವರು ಆ ದಿವಸದಲ್ಲಿ ನೀನು ಕಟ್ಟಿದ ಕ್ರಯವನ್ನು ಕರ್ತನಿಗೆ ಪರಿಶುದ್ಧವಾದದ್ದಾಗಿ ಅವನು ಕೊಡಬೇಕು.

ಸಂದರ್ಭದೊಂದಿಗೆ ಓದಿ · ಯಾಜಕಕಾಂಡ 27

21ಆ ಹೊಲವು ಜೂಬಿಲಿ ಸಂವತ್ಸರದಲ್ಲಿ ಬಿಡುಗಡೆಯಾಗುವಾಗ ಪ್ರತ್ಯೇಕಿಸಲ್ಪಟ್ಟು ಒಪ್ಪಿಸಲ್ಪಟ್ಟ ಹೊಲದ ಹಾಗೆ ಕರ್ತನಿಗೆ ಅದು ಪರಿಶುದ್ಧವಾಗಿರಬೇಕು; ಅದರ ಸ್ವಾಸ್ತ್ಯವು ಯಾಜಕ ನಿಗೆ ಸಲ್ಲಬೇಕು.

22ತನ್ನ ಸ್ವಾಸ್ತ್ಯದ ಹೊಲಗಳಲ್ಲಿ ಸೇರದಂಥ, ತಾನು ಕೊಂಡುಕೊಂಡ ಹೊಲವನ್ನು ಒಬ್ಬನು ಕರ್ತನಿಗೆ ಪರಿಶುದ್ಧ ಮಾಡಿದರೆ

23ಯಾಜಕನು ಅವನಿಗೆ ನೀನು ನೇಮಿಸಿದ ಕ್ರಯದ ಹಣವನ್ನು ಜೂಬಿಲಿ ಸಂವತ್ಸರದ ವರೆಗೂ ಎಣಿಸಬೇಕು; ಅವರು ಆ ದಿವಸದಲ್ಲಿ ನೀನು ಕಟ್ಟಿದ ಕ್ರಯವನ್ನು ಕರ್ತನಿಗೆ ಪರಿಶುದ್ಧವಾದದ್ದಾಗಿ ಅವನು ಕೊಡಬೇಕು.

24ಜೂಬಿಲಿ ಸಂವತ್ಸರದಲ್ಲಿ ಆ ಹೊಲದ ಭೂಮಿಯ ಸ್ವಾಸ್ತ್ಯವುಂಟಾದವನಿಗೆ ಅಂದರೆ ಇವನು ಯಾವನಿಂದ ಕೊಂಡುಕೊಂಡನೋ ಅವನಿಗೆ ತಿರುಗಿ ಹಿಂದಕ್ಕೆ ಕೊಡಬೇಕು.

25ನೀನು ನೇಮಿಸಿದ ಕ್ರಯಗಳೆಲ್ಲಾ ಪರಿಶುದ್ಧ ಶೇಕೆಲಿನ ಮೇರೆಗೆ ಇರಬೇಕು; ಶೇಕೆಲಿಗೆ ಇಪ್ಪತ್ತು ಗೇರಗಳಿರಬೇಕು.

ಯಾಜಕಕಾಂಡ 27 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी